Advertisement

ದೆಹಲಿ ಸರ್ಕಾರಕ್ಕೆ ಸಚಿವೆ ಅಭಿನಂದನೆ

11:29 AM Aug 11, 2018 | Team Udayavani |

ಬೆಂಗಳೂರು: ದೆಹಲಿಯಲ್ಲಿ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸಲು ಸಮ್ಮತಿ ನೀಡಿರುವ ದೆಹಲಿ ಸರ್ಕಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ  ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

Advertisement

ಕನ್ನಡ ಭಾಷೆ, ಸಂಸ್ಕೃತಿ ಬೆಳವಣಿಗೆಗೆ ಅಕಾಡೆಮಿ ಸಹಕಾರಿಯಾಗಲಿದೆ. ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರ ಹಿತರಕ್ಷಣೆ ನಿಟ್ಟಿನಲ್ಲಿ ಕನ್ನಡ ಭಾಷಾ ಅಕಾಡೆಮಿ ಕಾರ್ಯನಿರ್ವಹಿಸಲಿದೆ. ದೆಹಲಿಯಲ್ಲಿ  ಅಕಾಡೆಮಿ ಸ್ಥಾಪಿಸಬೇಕೆಂಬುದು ಸರ್ಕಾರದ ಕನಸಾಗಿತ್ತು. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ರಾಣಿ ಜಾರ್ಜ್‌ ಭೇಟಿ: ಕೇರಳದ‌ ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ರಾಣಿ ಜಾರ್ಜ್‌ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಚಿವೆ ಡಾ.ಜಯಮಾಲಾ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು. ಇದೇ ವೇಳೆ ಕರ್ನಾಟಕ ಮತ್ತು ಕೇರಳ ಪರಂಪರಾ ಉತ್ಸವ ಆಚರಣೆ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್‌ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next