Advertisement

ಕಮಿಷನ್‌ ದಂಧೆಯಲ್ಲಿ ಕೈ ಸಚಿವರು ಭಾಗಿಯಾಗಿರಲಿಲ್ಲ: ಪರಮೇಶ್ವರ್‌

11:39 PM Aug 27, 2022 | Team Udayavani |

ತುಮಕೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ದಲ್ಲಿದ್ದ ಸಂದರ್ಭದಲ್ಲಿ ಕಮೀಷನ್‌ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್‌ ಸಚಿವರು ಯಾರೂ ಕಮೀಷನ್‌ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯ ಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದರು.

Advertisement

ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ.ಸೂಲಗಿತ್ತಿ ನರಸಮ್ಮ ನವರ 102ನೇ ಜಯಂತ್ಯುತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಅವಧಿಯಲ್ಲಿ ಪರ್ಸಂಟೇಸ್‌ ದಂಧೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಈಗ ಹೇಳಿದ್ದರೆ ಯಾವ ಸಚಿವಾಲಯದಲ್ಲಿ, ಯಾವ ಸಚಿವರು ಮಾಡಿದ್ದಾರೆ ಎಂಬುದನ್ನು ಅವರೇ ಹೇಳ ಬೇಕಿದೆ. ಏಕೆಂದರೆ ಮುಖ್ಯಮಂತ್ರಿಯಾಗಿದ್ದವರು ಅವರು. ಕಾಂಗ್ರೆಸ್‌ನ ಸಚಿವರು ಯಾರೂ ಸಹ ಈ ಪರ್ಸಂಟೇಸ್‌ ದಂಧೆಯಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕ್ರಮ ಕೈಗೊಳ್ಳಲಿ: ರಾಜ್ಯ ಬಿಜೆಪಿ ಸರ್ಕಾರ ಗುತ್ತಿಗೆದಾರ ರಿಂದ 40 ಪರ್ಸೆಂಟೇಸ್‌ ಕಮೀಷನ್‌ ಪಡೆಯುತ್ತಿದೆ. ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಯವರಿಗೆ ಗುತ್ತಿಗೆದಾರ ಸಂಘದಿಂದ ಪತ್ರ ಬರೆದಿದ್ದಾರೆ. ಈ ಪತ್ರ ವನ್ನು ಕೇಂದ್ರ ಸರ್ಕಾರ ಗಂಭೀರ ವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದ ಜನ ಬಿಜೆಪಿ ಸರ್ಕಾರದ ಆಡಳಿತವನ್ನು ಗಮನಿಸುತ್ತಿದ್ದಾರೆ. ಮುಂಬರುವ 2023ರಲ್ಲಿ ಬಿಜೆಪಿಗೆ ಪ್ರತ್ಯುತ್ತರವನ್ನು ಜನರೇ ಕೊಡಲಿದ್ದಾರೆ ಎಂದರು.

ತುಮಕೂರು ವಿವಿಯನ್ನು ಇದುವರೆಗೆ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ. ನನ್ನ ಪ್ರಯತ್ನದಿಂದ ವಿಶ್ವವಿದ್ಯಾನಿಲಯ ಸ್ಥಾಪನೆಯಾ ಯಿತು. ಆದರೆ ಇದುವರೆಗೂ ಹೊಸ ಕ್ಯಾಂಪಸ್‌ಗೆ ಹೋಗಲು ಸಾಧ್ಯವಾಗಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಅನುದಾನ ಬಿಡುಗಡೆ ಮಾಡಿ ಆದಷ್ಟು ಬೇಗ ಹೊಸ ಕ್ಯಾಂಪಸ್‌ಗೆ ತುಮಕೂರು ವಿವಿ ಸ್ಥಳಾಂತರವಾಗುವಂತೆ ಮಾಡ ಬೇಕು ಎಂದು ಒತ್ತಾಯಿಸಿದರು.

Advertisement

ಕೆ.ಎಚ್‌.ಮುನಿಯಪ್ಪನವರು ನಮ್ಮ ಪಕ್ಷದ ಹಿರಿಯ ನಾಯಕರು. 7 ಬಾರಿ ಲೋಕಸಭಾ ಸದಸ್ಯರಾಗಿದ್ದವರು. ಅವರು ಪಕ್ಷ ಬಿಡುವುದಿಲ್ಲ. ಮಾದಾರ ಚನ್ನಯ್ಯ ಸ್ವಾಮೀಜಿಯವರು ಯಾವ ಅರ್ಥದಲ್ಲಿ ಹೇಳಿಕೆ (ಮುನಿಯಪ್ಪ ಅವರನ್ನು ಕಾಂಗ್ರೆಸ್‌ ಪಕ್ಷ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ) ನೀಡಿದ್ದಾರೋ ನನಗೆ ಗೊತ್ತಿಲ್ಲ.
-ಡಾ.ಜಿ.ಪರಮೇಶ್ವರ್‌, ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್‌ ಹಿರಿಯ ಮುಖಂಡ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next