ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೂತ್ ಮಟ್ಟದಲ್ಲಿಯೂ ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ ಮಾಡಲು ತೀರ್ಮಾನಿಸಿದ್ದಾರೆ.
Advertisement
ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ಪ್ರಚಾರಗಳನ್ನು ಹೊರತು ಪಡಿಸಿ, ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ರಾಜ್ಯ ಹಾಗೂ ಸ್ಥಳೀಯ ನಾಯಕರನ್ನು ಬಳಸಿಕೊಂಡು ಪ್ರತ್ಯೇಕವಾಗಿ ಪ್ರಚಾರ ಸಭೆ ಸಮಾರಂಭಗಳನ್ನು ಏರ್ಪಡಿಸಲು ತೀರ್ಮಾನಿಸಿದ್ದಾರೆ.
ಹೇಳಿಕೆ ನೀಡದಂತೆ ಸೂಚಿಸಿದ್ದಾರೆ. ನಾಲ್ಕೂವರೆ ವರ್ಷದಲ್ಲಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆ
ಗಳನ್ನು ಬೀದಿ ನಾಟಕ, ಸೋಶಿಯಲ್ ಮೀಡಿಯಾ ಹಾಗೂ ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರದ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದ್ದಾರೆ.