Advertisement

ಸಚಿವ ಡಿ.ಕೆ.ಶಿವಕುಮಾರ್‌ ಕೋರ್ಟ್‌ಗೆ ಹಾಜರು

11:02 PM Jun 01, 2019 | Lakshmi GovindaRaj |

ಬೆಂಗಳೂರು: ದೆಹಲಿಯ ತಮ್ಮ ನಿವಾಸದ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಐಟಿ ದಾಳಿ ಪ್ರಕರಣದ ಆರೋಪದಿಂದ ತಮ್ಮನ್ನು ಕೈ ಬಿಡುವಂತೆ ಕೋರಿ ಡಿ.ಕೆ.ಶಿವಕುಮಾರ್‌ ಈ ಹಿಂದೆ ಅರ್ಜಿ ಸಲ್ಲಿಸಿದ್ದರು.

Advertisement

ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಚಾರಣೆ ವೇಳೆ ಆದಾಯ ತೆರಿಗೆ ಇಲಾಖೆ ಪರ ವಕೀಲರು ಪ್ರಕರಣದಲ್ಲಿ ವಾದ ಮಂಡಿಸಲು ಕಾಲಾವಕಾಶ ಕೋರಿದ್ದರು. ಹೀಗಾಗಿ, ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿ ಆದೇಶಿಸಿದರು.

ಏನಿದು ಪ್ರಕರಣ?: 2017ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ ಅವರಿಗೆ ಸೇರಿದ್ದು ಎನ್ನಲಾದ ದೆಹಲಿಯ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ 8.50 ಕೋಟಿ ರೂ.ಪತ್ತೆಯಾಗಿದ್ದು, ಐಟಿ ಅಧಿಕಾರಿಗಳ ತನಿಖೆಯಲ್ಲಿ ಈ ಹಣ ಸಚಿವರಿಗೆ ಸೇರಿದೆ ಎನ್ನಲಾಗಿತ್ತು. ಈ ಸಂಬಂಧ ಐಟಿ ಅಧಿಕಾರಿಗಳು ಶಿವಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next