ಮದ್ದೂರು: ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯುವುದಿಲ್ಲ, ಅವಧಿಗೆ ಸರಿಯಾಗಿ ಚುನಾವಣೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಿಗದಿತ ಅವಧಿಯಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು ಅವಧಿಗೆ ಮೊದಲು ನಡೆಯುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ಪುನರ್ ರಚನೆಗೆ ಮುಖ್ಯಮಂತ್ರಿಗಳು ವರಿಷ್ಠರ ಜತೆ ಚರ್ಚಿಸಿ ಸೂಕ್ತ ಕ್ರಮವಹಿಸಲಿದ್ದು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದು ಬಳಿಕ ಸಚಿವ ಸಂಪುಟ ಪುನರ್ ರಚನೆ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ನೆಲೆ ಇಲ್ಲದ ಪಕ್ಷ. ಅದರ ನಾಯಕರಿಗೂ ನೆಲೆ ಇಲ್ಲದಂತಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲೇ ತೊಡಗಿದ್ದು ಕೊನೆಗೂ ಯಾವ ಕ್ಷೇತ್ರದಲ್ಲಿ ಹೋಗಿ ಸ್ಪರ್ಧೆ ಮಾಡುತ್ತಾರೋ ಕಾದು ನೋಡಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ಎಚ್.ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಹಾಗೂ ವಿಶ್ವನಾಥ್ ನಡುವೆ ವ್ಯತ್ಯಾಸವಿದ್ದು ಅವರ ವೈಯಕ್ತಿಕ ಸಂಬಂಧಗಳು ಏನು ಅಂತ ಗೊತ್ತಿಲ್ಲ, ಈಗಾಗಲೇ ವಿಶ್ವನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಹೋಗಿದ್ದರು. ಈಗ ಬಿಜೆಪಿಯಲ್ಲಿದ್ದಾರೆ. ಅವರು ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಗೊತ್ತಿಲ್ಲ ಎಂದರು.
ಇದನ್ನೂ ಓದಿ: 1992 ರ ಮುಂಬಯಿ ಗಲಭೆ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್