Advertisement
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಪ್ರತಿಯೊಂದು ಧರ್ಮವನ್ನೂ ಸಮಾನವಾಗಿ ಕಾಣುತ್ತಿದೆ. ಯಾರೊಬ್ಬರು ಕೂಡ ಮೇಲೂ ಅಲ್ಲ, ಕೀಳೂ ಅಲ್ಲ, ಅವರವರ ಧರ್ಮ ಮತ್ತು ಆಚರಣೆಗೆ ಕಾನೂನಿನಲ್ಲಿ ಅವಕಾಶವಿದೆ. ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದರು.
Related Articles
Advertisement
ಇದು ಕೇವಲ ಒಂದು ಧರ್ಮದ ಸರ್ಕಾರವಲ್ಲ. ರಾಜ್ಯದಲ್ಲಿರುವ ಆರೂವರೆ ಕೋಟಿ ಜನರ ಧರ್ಮಗಳನ್ನೂ ಗೌರವದಿಂದ ಕಾಣುತ್ತದೆ. ಜಾತ್ಯತೀಯ ನಿಲುವಿನಲ್ಲಿ ಬದಲಾವಣೆ ಇಲ್ಲ. ಇದು ಸರ್ಕಾರದ ನಿಲುವು ಕೂಡ ಆಗಿದೆ. ಹಲಾಲ್ ನಿಷೇಧದ ಹಿಂದೆ ಯಾರಿದ್ದಾರೋ ನನಗೂ ಗೊತ್ತಿಲ್ಲ. ಆದರೆ, ಖಂಡಿತವಾಗಿಯೂ ಇದರಲ್ಲಿ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕಾದ ಅವಶ್ಯಕತೆ ಇದೆ ಎಂದರು.
ಮುಸ್ಕಾನ್ ಮುಗ್ಧತೆಯೇ ಅಸ್ತ್ರ:
ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್ ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದರು.
ಭಯೋತ್ಪಾದಕರಿಂದ ಜನರಲ್ಲಿ ಭಯ ಹುಟ್ಟಿಸಲಷ್ಟೇ ಸಾಧ್ಯ. ದುರದೃಷ್ಟವಶಾತ್ ಮುಸ್ಕಾನ್ ಯಾಕೆ ಈ ರೀತಿ ಹೇಳಿಕೆ ಕೊಟ್ಟಳು ಎನ್ನುವುದು ಗೊತ್ತಿಲ್ಲ. ನಾವು, ಯಾವತ್ತು ಕಾನೂನು ಪಾಲನೆ ಮಾಡಬೇಕು. ನೆಲದ ಕಾನೂನನ್ನು ಗೌರಿಸಬೇಕಿದೆ ಎಂದು ಹೇಳಿದರು.