Advertisement

Bidar; ಔರಾದ್ ನ ಕೌಡಗಾವ್ ನಲ್ಲಿ ಶಾಂತಿ ಕಾಪಾಡಲು ಸಚಿವ ಈಶ್ವರ ಖಂಡ್ರೆ ಮನವಿ

03:14 PM Feb 15, 2024 | Team Udayavani |

ಬೀದರ್: ಬುದ್ಧ, ಬಸವ, ಅಂಬೇಡ್ಕರ್ ಎಲ್ಲರಿಗೂ ಪೂಜನೀಯರಾಗಿದ್ದು, ಅವರ ಆದರ್ಶ ಪಾಲಿಸುವ ನಾವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಬೇಕು, ಸಹಬಾಳ್ವೆಯಿಂದ ಬಾಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಔರಾದ ತಾಲೂಕಿನ ಕೌಡಗಾವ್ ನಲ್ಲಿ ಎರಡು ಸಮುದಾಯಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಮತ್ತು ಆತಂಕದ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಭಗವಾನ್ ಬುದ್ಧ, ಬಸವಣ್ಣನವರು ಮತ್ತು ಅಂಬೇಡ್ಕರ್ ಅವರು ಸಹಬಾಳ್ವೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ತತ್ವ ಸಾರಿದರು. ನಾವು ಅವರೆಲ್ಲರ ಆದರ್ಶ ಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೌಡಗಾವ್ ಗ್ರಾಮದಲ್ಲಿನ ಸಮುದಾಯಗಳ ಮಧ್ಯದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಕಾನೂನಿನ ಚೌಕಟ್ಟಿನಲ್ಲಿ ಸಮಾನ ನ್ಯಾಯ ಒದಗಿಸಲಾಗುವುದು. ಎಲ್ಲರೂ ಭಿನ್ನಾಭಿಪ್ರಾಯ ಮರೆತು ಶಾಂತಿ, ಸೌಹಾರ್ದತೆಯಿಂದ ಸೋದರರಂತೆ ಬಾಳುವಂತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತಕ್ಕೆ ಸೂಚನೆ: ಕೌಡಗಾವ್ ನಲ್ಲಿ ದಲಿತ ಸಮುದಾಯದವರು ಮೃತಪಟ್ಟಾಗ ಅಂತ್ಯಕ್ರಿಯೆ ನೆರವೇರಿಸಲು ಸ್ಮಶಾನ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಜಿಲ್ಲಾಡಳಿತ ಜಾಗ ಗುರುತಿಸಿ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸ್ಮಶಾನ ಭೂಮಿಗೆ ಬೇಕಾದ ಅನುದಾನವನ್ನು ಸರ್ಕಾರ ಮಂಜೂರು ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next