Advertisement
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತೆ ಇರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ಇನ್ನಷ್ಟು ಬಂಧನದ ಸಾಧ್ಯತೆಗಳನ್ನು ಅವರು ನಿರಾಕರಣೆ ಮಾಡಲಿಲ್ಲ. ಬದಲಿಗೆ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.
ಕನ್ನಡ ಚಲನಚಿತ್ರ ನಟ ದರ್ಶನ ಹಾಗೂ ವಿನಯ ಗುರೂಜಿ ಅವರು ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದು ಕೊಂಡಿದ್ದಾರೆ ಎನ್ನುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು. ಪ್ರಾಣಿಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷ ದ ಶಿಕ್ಷೆಯೂ ಇದೆ ಎಂದರು. ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಶರಣಕುಮಾರ ಮೋದಿ ಹಾಗೂ ಇದ್ದರು.
Related Articles
Advertisement