Advertisement

ಸಚಿವ ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

11:58 AM Sep 17, 2017 | |

ಶಿವಮೊಗ್ಗ: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್‌ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ಪಕ್ಷದ ಕಚೇರಿಯಿಂದ ಜಿಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರು ಮಾತನಾಡಿ, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಡಿವೈಎಸ್‌ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಆಗಿನ ಗೃಹ ಸಚಿವ ಕೆ.ಜೆ. ಜಾರ್ಜ್‌ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಆಗ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಿದ ಪರಿಣಾಮ ಜಾರ್ಜ್‌ ಅವರು ರಾಜೀನಾಮೆ ನೀಡಿದ್ದರು ಎಂದು ಪ್ರತಿಭಟನಾಕಾರರು ಹೇಳಿದರು.

ಆದರೆ ಜಾರ್ಜ್‌ ರಾಜೀನಾಮೆ ನಂತರದ ನಾಟಕೀಯ ಬೆಳವಣಿಗೆಯಲ್ಲಿ ಸರ್ಕಾರ ತನಗೆ ಬೇಕಾದಂತೆ ಸಿಐಡಿ ತನಿಖೆ ನಡೆಸಿ ಜಾರ್ಜ್‌ ತಪ್ಪಿತಸ್ಥರಲ್ಲ ಎಂದು ವರದಿ ಪಡೆಯಿತು. ನಿರೀಕ್ಷೆಯಂತೆ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯಿಂದ ರಾಜ್ಯದ ಜನತೆ ಮತ್ತು ಕುಟುಂಬ ವರ್ಗದವರು ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲ ಎಂದು ಬೇಸತ್ತಿದ್ದು, ಎಂ.ಕೆ. ಗಣಪತಿ ಕುಟುಂಬದವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆದೇಶ ನೀಡಿದೆ. ಆದ್ದರಿಂದ ಕೆ.ಜೆ. ಜಾರ್ಜ್‌ ಅವರು ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವುದರಿಂದ  ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌. ರುದ್ರೇಗೌಡ, ಆಯನೂರು ಮಂಜುನಾಥ್‌, ಡಿ.ಎಸ್‌. ಅರುಣ್‌, ದತ್ತಾತ್ರಿ, ಎಸ್‌. ಚನ್ನಬಸಪ್ಪ, ಜ್ಯೋತಿಪ್ರಕಾಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next