Advertisement

ಹಲವು ಮುಖಂಡರು ಕಮಲ ಹಿಡಿಯಲಿದ್ದಾರೆ:

04:58 PM Apr 24, 2022 | Team Udayavani |

ಹಾಸನ: ಇನ್ನು ಕೆಲವೇ ದಿನಗಳಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಹಲವು ಮುಖಂಡರು, ಪ್ರಮುಖ ಕಾರ್ಯಕರ್ತರು ಬಿಜೆಪಿ ಸೇರಲಿದ್ದಾರೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

Advertisement

ನಗರದ ಹೊರವಲಯದ ಎಚ್‌ಎಂಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದರು. ವರಿಷ್ಠರ ಸೂಚನೆಯಂತೆ ರಾಜ್ಯದಲ್ಲಿ ಬಿಜೆಪಿ ಸಂಘಟನೆ ನಡೆಯುತ್ತಿದೆ. ಕೇಂದ್ರದಲ್ಲಿ ಪ್ರಧಾನಿ ಮೋದಿ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ಕಾರ್ಯಕರ್ತರು ಮನೆ, ಮನೆಗೆ ತಲುಪಿಸಿ ಪಕ್ಷ ವನ್ನು ಸದೃಢಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಹಿನ್ನೆಲೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಹಲವು ಮುಖಂಡರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದರು.

ಚುನಾವಣೆ ತಂತ್ರಗಾರಿಕೆ ರಚನೆ: ಹಾಸನ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದಿದೆ. ಆದರೆ, ಈ ಹಿಂದೆ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು ಗೆದ್ದಿದ್ದ ಉದಾಹರಣೆಯೂ ಇದೆ. ಹಾಗಾಗಿ 2023ರ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲೂ ಬಿಜೆಪಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿದೆ ಎಂದು ತಿಳಿಸಿದರು.

ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಹಾಸನ: ಶಾಸಕ ಎನ್‌. ಮಹೇಶ್‌ ಅವರ ನೇತೃತ್ವದಲ್ಲಿ ಬಹುಜನ ಪಕ್ಷದ ಹಲವು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ನಗರದ ಕುರುಹಿನ ಶೆಟ್ಟಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಟೀಫ‌ನ್‌ ಪ್ರಕಾಶ್‌ ಸೇರಿ ಹಲವು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

Advertisement

ಈ ವೇಳೆ ಮಾತನಾಡಿದ ಮಹೇಶ್‌, ನನ್ನ ಬೆಂಬಲಿಗರು ರಾಜಕಾರಣ ಮಾಡುವ ಇಚ್ಛೆ ಇದ್ದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಎಂದು ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿ ಹಲವು ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿಯೂ ಹಲವು ಮಂದಿ ನನ್ನ ಅಭಿಮಾನಿಗಳು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next