Advertisement
ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಂಚಾರಿ ಪಶು ಚಿಕಿತ್ಸಾ ಘಟಕಗಳ ಲೋಕಾರ್ಪಣೆ ಹಾಗೂ ಇಲಾಖೆಯ ಪಶು ವೈದ್ಯಕೀಯ ಸ್ಪೆಷಾಲಿಟಿ ಆಸ್ಪತ್ರೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ರೈತರ ತರಬೇತಿ ಕೇಂದ್ರ ಹಾಗೂ ಪಶು ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರ ಕಟ್ಟಡಗಳ ಉದ್ಘಾಟನೆ ನೆರವೇರಿಸಿದ ನಂತರ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಗೋ ಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವ ಬದಲು ಗೋಶಾಲೆಗೆ ಕಳುಹಿಸಿ ಎಂದು ರೈತರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಾನು 20 ಸಾವಿರ ಗೋವುಗಳನ್ನು ರಕ್ಷಿಸಿ ಗೋಶಾಲೆಗೆ ಕಳುಹಿಸಿದ್ದೇನೆ. ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 900 ಪ್ರಕರಣಗಳನ್ನು ದಾಖಲಿಸಿ ಕ್ರಮಕ್ಕೂ ಮುಂದಾಗಿದ್ದೇನೆ ಎಂದರು.
ಜನರಿಗೆ ತೊಂದರೆಯಾದರೆ 108ಕ್ಕೆ ಮಾಡಿ ಜಾನುವಾರುಗಳಿಗೆ ತೊಂದರೆಯಾದರೆ 1962ಕ್ಕೆ ಕರೆ ಮಾಡಿ. ಪಶು ಚಿಕಿತ್ಸೆ ಸಲುವಾಗಿ ಈಗಾಗಲೇ ರಾಜ್ಯಕ್ಕೆ 275 ಸಂಚಾರಿ ಚಿಕಿತ್ಸಾ ಘಟಕಗಳು ಮಂಜೂರಾಗಿವೆ. ಜನರ ಜೊತೆಗೆ ಜಾನುವಾರುಗಳ ರಕ್ಷಣೆಗೆ ಕೂಡ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಅವರು ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರತಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೂ ರೈತರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಪಶು ಸಂರಕ್ಷಣೆಗಾಗಿ ಈಗಾಗಲೇ ಲೋಕಾರ್ಪಣೆಗೊಂಡಿರುವ ಸಂಚಾರಿ ಚಿಕಿತ್ಸಾ ಘಟಕಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಪಶು ಸಾಕಾಣಿಕೆಗೆ, ಚಿಕಿತ್ಸೆ, ಆಸ್ಪತ್ರೆ, ಲಾಭ, ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಇಲಾಖೆ ಮಾಡಿರುವ ಸಾಧನೆ ಬಗ್ಗೆ 8 ನಿಮಿಷಗಳ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಇಲಾಖೆಯ ವಿವಿಧ ಯೋಜನೆಗಳ ಅಡಿ 18 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳ ಚೆಕ್ ವಿತರಣೆ ಮಾಡಲಾಯಿತು.