Advertisement

ಯುಕೆಪಿ: ಪರಿಹಾರ ಪುನರ್ವಸತಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಗೋವಿಂದ ಕಾರಜೋಳ

08:34 PM Sep 29, 2022 | Team Udayavani |

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಪರಿಹಾರ ಮತ್ತು ಪುನರ್ವಸತಿಗೆ ಹೆಚ್ಚುವರಿಯಾಗಿ ಐದು ಸಾವಿರ ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದು ಪ್ರಸಕ್ತ ವರ್ಷದಲ್ಲಿ ಈ ಉದ್ದೇಶಕ್ಕೆ 10 ಸಾವಿರ ಕೋಟಿ ರೂ.  ವೆಚ್ಚ ಮಾಡಲು ಸರಕಾರ ಉದ್ದೇಶಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಕೃಷ್ಣಾ ನ್ಯಾಯಾಧಿಕರಣದ -ಬಿ ಸ್ಕೀಂನಡಿ ಹಂಚಿಕೆಯಾಗಿರುವ ನೀರಿನ ಬಳಕೆಗೆ ಸಂಬಂಧಿಸಿದಂತೆ ಮುಳುಗಡೆಯಾಗುವ 20  ಹಳ್ಳಿಗಳ 1.34 ಲಕ್ಷ ಹೆಕ್ಟೇರ್‌ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲಾಗುತ್ತಿದೆ. ಈ ಉದ್ದೇಶಕ್ಕೆ ಬಜೆಟ್‌ನಲ್ಲಿ ಐದು ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಹೆಚ್ಚುವರಿ ಐದು ಸಾವಿರ ಕೋಟಿ ರೂ. ಒದಗಿಸಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ. ಪರಿಹಾರ ಮತ್ತು ಪುನರ್ವಸತಿಗೆ 60 ಸಾವಿರಕೋಟಿ ರೂ.ಗಳ ಅಗತ್ಯವನ್ನು ಅಂದಾಜಿಸಲಾಗಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸೆ.26 ರಂದು ಪ್ರಕರಣ ವಿಚಾರಣೆಗೆ ಬರಬೇಕಿತ್ತಾದರೂ, ಮುಂದೂಡಿಕೆಯಾಗಿದೆ. ಕೋರ್ಟ್‌ನಲ್ಲಿ ಪ್ರಕರಣ ಶೀಘ್ರ ಇತ್ಯರ್ಥಪಡಿಸಲು ಸರಕಾರ ಅಗತ್ಯ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next