Advertisement

ಜೆಜೆಎಂ ಯೋಜನೆ… 3 ವರ್ಷದಲ್ಲಿ 7,904 ಕೋಟಿ ವೆಚ್ಚ: ಸಚಿವ ಕಾರಜೋಳ

07:34 PM Feb 23, 2023 | Team Udayavani |

ವಿಧಾನಪರಿಷತ್ತು: ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 7,904 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಶೇ.62ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿ, ಜಲ್‌ ಜೀವನ್‌ ಮಿಷನ್‌ ಯೋಜನೆಯ ರಾಜ್ಯದ ಪ್ರಗತಿ ದೇಶದ ಸರಾಸರಿಗಿಂತ ಹೆಚ್ಚಾಗಿದೆ ಎಂದರು.

ರಾಜ್ಯದಲ್ಲಿ 1.01 ಕೋಟಿ ಗ್ರಾಮೀಣ ಮನೆಗಳ ಪೈಕಿ ಜಲ್‌ ಜೀವನ್‌ ಮಿಷನ್‌ ಅನುಷ್ಠಾನದ ಪೂರ್ವದಲ್ಲಿ 24.51 ಲಕ್ಷ ಮನೆಗಳಿಗೆ ನಳ ಸಂಪರ್ಕ ಇತ್ತು. ಉಳಿದ 80 ಲಕ್ಷ ಮನೆಗಳಿಗೆ ನಳ ಸಂಪರ್ಕ ನೀಡಲು ಗುರಿ ಇಟ್ಟುಕೊಳ್ಳಲಾಗಿದ್ದು, ಕಳೆದ 3 ವರ್ಷಗಳಲ್ಲಿ 38.8 ಲಕ್ಷ ಮನೆಗಳಿಗೆ ನಳ ಸಂಪರ್ಕ ನೀಡಲಾಗಿದ್ದು, 42.13 ಲಕ್ಷ ಮನೆಗಳು ಬಾಕಿ ಉಳಿದಿವೆ. ಇವುಗಳಿಗೆ ನಳ ಸಂಪರ್ಕ ನೀಡಲು ತ್ವರಿತಗತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನ ಸೇರಿ ಒಟ್ಟು 7,904 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2024ರೊಳಗೆ ಗುರಿ ತಲುಪುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next