Advertisement

ಸುವರ್ಣಸೌಧಕ್ಕೆ ಕೆಲ ಕಚೇರಿ ಸಳಾಂತರ :ಸಚಿವ ಗೋವಿಂದ ಕಾರಜೋಳ 

05:40 PM Sep 12, 2021 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಸರಕಾರದ ಕೆಲವು ಕಚೇರಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚೇರಿ ಸ್ಥಳಾಂತರಕ್ಕೆ ಪ್ರಕ್ರಿಯೆಗಳು ನಡೆದಿವೆ. ಬೆಳಗಾವಿ ಐತಿಹಾಸಿಕ ನಗರವಾಗಿ ಸಾಬೀತು ಮಾಡಬೇಕೆಂದು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಇನ್ನೂ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಕುರಿತು ಶಾಸಕರು ಹಾಗೂ ಸಂಸದರು ತೀರ್ಮಾನಿಸುತ್ತಾರೆ ಎಂದರು.

ಜಿಲ್ಲೆಯ ಸಂಸದರು, ಸ್ಥಳೀಯ ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಹಾಗೂ ಕೆಲ ಶಾಸಕರ ಒಗ್ಗಟ್ಟಿನ ಪ್ರಯತ್ನದ ಪ್ರತಿಫಲವಾಗಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬೆಳಗಾವಿ ವಿಷಯದಲ್ಲಿ ಪದೇ ಪದೇ ವಿವಾದ ಉಂಟು ಮಾಡುವ ಎಂಇಎಸ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿ ನಮ್ಮದೆಂದು ಹೇಳುವರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರಿಗೆ ಕರ್ನಾಟಕದ ಒಂದಿಂಚೂ ನೆಲ ಮತ್ತು ನೀರು ಬಿಟ್ಟು ಕೊಡಲ್ಲ. ಈ ವಿಷಯದಲ್ಲಿ ಮಹಾಜನ ವರದಿಯೇ ಅಂತಿಮ. ಇದರ ಬಗ್ಗೆ2006ರಲ್ಲಿವಿಧಾನಸಭೆಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಯಾವುದೇ ಸಂಘ-ಸಂಸ್ಥೆಗಳು ನಿರ್ಣಯ ಅಂಗೀಕರಿಸಿದರೆ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಸಂಸದೆ ಮಂಗಲ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಸುದ್ದಿಗೋಷ್ಠಿಯಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next