Advertisement

ಖನಿಜ ರಕ್ಷಣಾ ಪಡೆಯ ಗಸ್ತು ವಾಹನಗಳಿಗೆ ಸಚಿವ ಹಾಲಪ್ಪ ಆಚಾರ್ ಚಾಲನೆ

04:09 PM Dec 27, 2022 | Team Udayavani |

ಸುವರ್ಣಸೌಧ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದುಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

Advertisement

ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ‘ಖನಿಜ ರಕ್ಷಣಾ ಪಡೆ’ ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೋಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿ ಆಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:ಚೆಂಡೆ ವಾದನ ಬಡಿಯುತ್ತಾ ಮದುವೆ ಮಂಟಪಕ್ಕೆ ಬಂದ ವಧು: ವಿಡಿಯೋ ವೈರಲ್

ಮೊದಲ ಹಂತದಲ್ಲಿ ಖನಿಜ ರಕ್ಷಣಾ ಪಡೆಯನ್ನು ಹೆಚ್ಚಿನ ಖನಿಜ/ ಉಪಖನಿಜ ಗಣಿಗಾರಿಕೆ ಇರುವ ಎಂಟು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಇದರ ನಿರ್ವಹಣೆಗೆ ಪ್ರತಿ ಜಿಲ್ಲೆಗೆ ಹವಾಲ್ದಾರ್‌ ದರ್ಜೆಯ 03 ನಿವೃತ್ತ ಸೈನಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next