Advertisement

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

05:25 PM Oct 20, 2021 | Team Udayavani |

ಕೊಪ್ಪಳ: ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದಿರುವ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ, ಅವರಿಂದ ನಾವು ಸರ್ಟಿಫಿಕೇಟ್ ಪಡೆಯುವ ಅಗತ್ಯವಿಲ್ಲ. ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯೂ ಕಾಂಗ್ರೆಸ್‌ಗೆ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.

Advertisement

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ನವರು ನಮಗೆ ಸರ್ಟಿಫಿಕೆಟ್ ಕೊಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ಉತ್ತಮ ಆಡಳಿತ ನಡೆಸಿದೆ. ದೇಶದ ೧೩೦ ಕೋಟಿ ಜನರನ್ನು ಪ್ರತಿನಿಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ನಮ್ಮ ಅಭಿವೃದ್ಧಿ ನೋಡಿ ಜನರು ಎರಡು ಬಾರಿ ನಮಗೆ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್ ಇನ್ನೊಬ್ಬರ ಬಗ್ಗೆ ಮಾತನಾಡುವ ನೈತಿಕತೆಯನ್ನೂ ಕಳೆದುಕೊಂಡಿದೆ ಎಂದರು.

ರಾಹುಲ್ ಗಾಂಧಿ ಡ್ರಗ್ ಫೆಡ್ಲರ್ ಎನ್ನುವ ಕಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಮಾಧ್ಯಮದ ವರದಿ ಆಧರಿಸಿ ಆ ಹೇಳಿಕೆ ನೀಡಿದ್ದಾರೆ. ಮಾಧ್ಯಮದ ವರದಿ ಉಲ್ಲೇಖಿಸಿದರೆ ಕಾಂಗ್ರೆಸ್‌ಗೆ ಸಿಟ್ಟು ಬರುತ್ತದೆ. ಇರೋ ವಿಚಾರವನ್ನು ಹಂಚಿಕೆಕೊಂಡರೆ ಸಿಟ್ಯಾಕೇ ಎಂದು ಸಚಿವರು ಪ್ರಶ್ನಿಸಿದರು.

ಇದನ್ನೂ ಓದಿ: 5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ. ಕಾರ್ಯಕರ್ತರ ತಂಡ, ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಸಾಧನೆಯನ್ನ ಮುಂದಿಟ್ಟು ಜನರ ಮುಂದೆ ಮತ ಕೇಳುತ್ತಿದ್ದೇವೆ. ಅದ್ಬುತ ಸ್ಪಂದನೆಯೂ ದೊರೆಯುತ್ತಿದೆ. ಖಂಡಿತ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದರು.

Advertisement

ಇನ್ನು ಕುಮಾರಸ್ವಾಮಿ ಅವರು ಎರಡು ಮದುವೆ ಮಾಡಿಕೊಂಡ ವಿಚಾರ ಪ್ರತಿಕ್ರಿಯಿಸಿ, ರಾಜಕಾರಣಿಗಳು ರಾಜಕೀಯ ಮಾತನಾಡಬೇಕು. ಅವರ ವಯಕ್ತಿಕ ವಿಚಾರ ಮಾತನಾಡಬಾರದು. ಯಾರೂ ವಯಕ್ತಿಕ ವಿಚಾರ ಮಾತನಾಡುವುದು ಸರಿಯಲ್ಲ ಎಂದರಲ್ಲದೇ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಕುರಿತು ಮಾತನಾಡಿ, ಅವರ ತ್ಯಾಗದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next