ಕೊಪ್ಪಳ: ಕಾಂಗ್ರೆಸ್ ಈ ದೇಶದಲ್ಲಿ ಬಹು ವರ್ಷಗಳ ಕಾಲ ಅಧಿಕಾರ ಅನುಭವಿಸಿದ್ದಾರೆ. ಈಗ ಅಧಿಕಾರ ಕಳೆದುಕೊಂಡು ಸಿಎಂ ರೇಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಎಂದಿಗೂ ಅಧಿಕಾರ ಸಿಗುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈಚೆಗಿನ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನೆಡೆ ಎಂದೆನ್ನುತ್ತಿದ್ದಾರೆ. ಈ ಹಿಂದೆಯೂ ಉತ್ತರ ಪ್ರದೇಶದಲ್ಲಿ ಹಿನ್ನಡೆಯಾಗಲಿದೆ ಎಂದು ಹೇಳಿದ್ದರು. ಆದರೆ ಫಲಿತಾಂಶ ಏನಾಯ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದರು.
ಬೆಲೆ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ನೋಡುವುದಾದರೆ ಬೆಲೆ ಏರಿಕೆ ಇಂದು ಅನಿವಾರ್ಯವಾಗಿದೆ. ಕೆಲವೊಂದು ಸಂದರ್ಭದಲ್ಲಿ ಕಾಲ ಕಾಲಕ್ಕೆ ಏರಿಕೆ ಮಾಡಬೇಕಾಗುತ್ತದೆ. ಅಲ್ಲದೇ ಕೆಲವೊಂದು ವಸ್ತುಗಳ ಮೇಲೆ ವಿನಾಯತಿ ನೀಡಲಾಗಿದೆ. ಆದರೆ ಅದನ್ನು ಯಾರೂ ಪ್ರಚಾರ ಮಾಡುವುದಿಲ್ಲ ಎಂದರಲ್ಲದೇ, ಜು.21 ರಂದು ಕಾಂಗ್ರೆಸ್ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ಬಗ್ಗೆ ಪ್ರತಿಭಟನೆ ನಡೆಸಿರುವ ನಿರ್ಧಾರಿಸಿದ ವಿಚಾರ, ವಿರೋಧ ಪಕ್ಷವಾಗಿ ಅವರು ವಿರೋಧ ಮಾಡುತ್ತಿದ್ದಾರೆ ಎಂದರು.
ಸಂತೋಷ ಜಿ ಅವರನ್ನು ಕಂಡರೆ ಕಾಂಗ್ರೆಸ್‌ಗೆ ಭಯವಿದೆ. ಅವರು ಚತುರರಿರುವುದರಿಂದಲೇ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ. ಇದರಿಂದಾಗಿ ಅವರು ಸಂತೋಷ್ ಜಿ ಬಗ್ಗೆ ಮಾತಾಡುತ್ತಿದ್ದಾರೆ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ರಸ ಗೊಬ್ಬರದ ಕೊರತೆಯ ಬಗ್ಗೆ ಪ್ರತಿಕ್ರಿಯಿಸಿ, ಪ್ರಸ್ತುತ ಮಳೆಯಾಗಿದೆ. ಸಹಜವಾಗಿ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಸಹಕಾರಿ ಸಂಘಗಳಿಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಒಂದು ವೇಳೆ ಖಾಸಗಿಯವರಿಗೆ ಹೆಚ್ಚು ಗೊಬ್ಬರ ಪೂರೈಕೆ ಮಾಡಿದ್ದರೆ ಹೇಳಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.