Advertisement
ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಜೆಡಿಎಸ್ ಸದಸ್ಯ ಕೆ.ಎಂ.ತಿಮ್ಮರಾಯಪ್ಪ ಅವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದುವರೆಗೆ ಎನ್‌ಆರ್‌ಡಿಡಬ್ಲ್ಯುಪಿ ಅನುದಾನ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದರಿಂದ ಹೊಸ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.
Related Articles
ಪಾವಗಡದ ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಡಿ ಶೇ. 50ರಷ್ಟು ಆರ್ಥಿಕ ನೆರವು ನೀಡಲು ಒಪ್ಪಿಗೆ ನೀಡಿದೆ. ಆದ್ದರಿಂದ ಶೀಘ್ರವೇ ಯೋಜನೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
Advertisement
17000 ಕೋಟಿಯ ಕಾಮಗಾರಿ ಬಾಕಿರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ರಾಜ್ಯಕ್ಕೆ ಮಂಜೂರಾದ ಯೋಜನೆಯಡಿ 17 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಬಾಕಿ ಇವೆ. ಹೀಗಾಗಿ ಈ ಕಾಮಗಾರಿ ಮುಗಿಯುವವರೆಗೆ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ಹೇಳಿದೆ ಎಂದು ಬಿಜೆಪಿ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆ ವೇಳೆ ಬಿಜೆಪಿಯ ಗೋವಿಂದ ಕಾರಜೋಳ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕುರಿತಂತೆ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, ಎನ್‌ಆರ್‌ಡಿಡಬ್ಲ್ಯುಪಿ ಅಡಿ ಹೊಸ ಯೋಜನೆ ಕೈಗೆತ್ತಿಕೊಳ್ಳದಂತೆ ಕೇಂದ್ರ ಸೂಚನೆ ನೀಡಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಆದರೆ, ಅದಕ್ಕೆ ಕಾರಣ ಹೇಳದೆ ವಿನಾ ಕಾರಣ ಆರೋಪದ ರೀತಿ ಮಾತನಾಡಿದ್ದಾರೆ ಎಂದರು. ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ ಶೇ. 60ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ ಶೇ. 40ನ್ನು ರಾಜ್ಯ ಸರ್ಕಾರ ಭರಿಸಬೇಕು. ಅದರಂತೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಆದರೆ, ರಾಜ್ಯದಲ್ಲಿ ಈ ಯೋಜನೆಯಡಿ 17 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳು ಬಾಕಿ ಇವೆ. ಇದನ್ನು ಮೊದಲು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಸ್ಪಷ್ಟಪಡಿಸಿದರು. ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಲ್ಲಿ ಶೇ.60 ಕೇಂದ್ರ ಸರ್ಕಾರ ಹಾಗೂ ಶೇ.40 ರಾಜ್ಯ ಸರ್ಕಾರಗಳ ಪಾಲಿದೆ. ಆದರೆ, ರಾಜ್ಯದಲ್ಲಿ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
– ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೇಂದ್ರ ಸರ್ಕಾರವು 2017-18ನೇ ಸಾಲಿಗೆ ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ 290.85 ಕೋಟಿ ರೂ. ನಿಗದಿಪಡಿಸಿದ್ದು, ಈ ಮೊತ್ತವನ್ನು ಮುಂದುವರಿದ ಕಾಮಗಾರಿಗಳಿಗೆ ಮಾತ್ರ ಬಳಸಲು ನಿರ್ದೇಶನ ನೀಡಿದೆ.
– ಎಚ್.ಕೆ.ಪಾಟೀಲ್,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ