ಬೆಂಗಳೂರು: ಖಾತೆ ಹಂಚಿಕೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಆದರೂ ಮನವಿ ಮಾಡಿದ್ದೆ. ಅನುಭವ ಇಲ್ಲದ ವೈದ್ಯಕೀಯ ಶಿಕ್ಷಣ ಖಾತೆ ಸಿಕ್ಕಿದೆ, ನೋಡೋಣ.. ಇದು ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ಅವರ ನೋವಿನ ಮಾತು.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.
ತಮ್ಮಲ್ಲಿದ್ದ ಕಾನೂನು, ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಖಾತೆಯನ್ನು ಹಿಂಪಡೆದು ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ ನೀಡಿರುವ ಬಗ್ಗೆ ಸಚಿವ ಮಾಧುಸ್ವಾಮಿ ಗರಂ ಆಗಿದ್ದಾರೆ.
ಇದನ್ನೂ ಓದಿ:ಸಚಿವರ ಖಾತೆ ಬದಲಾವಣೆ: ಮುನಿಸಿಕೊಂಡ ಮಾಧುಸ್ವಾಮಿ, ಸಂಪುಟ ಅತೃಪ್ತರ ಸಭೆ, ರಾಜೀನಾಮೆ?
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಮುಖ್ಯಮಂತ್ರಿಯವರ ಪರಮಾಧಿಕಾರ. ಹಾಗಾಗಿ ಪಾಲಿಗೆ ಬಂದಿದ್ದನ್ನು ಒಪ್ಪಿಕೊಳ್ಳಬೇಕಾಗುತ್ತದೆ. ನನಗೇನೂ ಬೇಸರವಿಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವು ಸುಳ್ಳು ಎಂದರು.
ಇದನ್ನೂ ಓದಿ: ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಂಗಾರಗೆ ಮೀನುಗಾರಿಕೆ; ಎಂಟಿಬಿಗೆ ಅಬಕಾರಿ
ಸಣ್ಣ ನೀರಾವರಿ ಖಾತೆ ಹಿಂಪಡೆಯದಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೂ ಬದಲಾವಣೆ ಮಾಡಿದ್ದಾರೆ. ಯಾಕೆಂದು ಗೊತ್ತಿಲ್ಲ. ಅನುಭವವೇ ಇಲ್ಲದ ವೈದ್ಯಕೀಯ ಶಿಕ್ಷಣ ಖಾತೆ ಸಿಕ್ಕಿದೆ. ನೋಡೋಣ ಎಂದರು.