ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳಲ್ಲಿ ರೆಮಿಡಿಸಿವರ್ ಚುಚ್ಚುಮದ್ದು ಹಾಗೂ ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೃತಕ ಅಭಾವ ಸೃಷ್ಟಿಸುವವರನ್ನು ವಿಪತ್ತು ನಿರ್ವಹಣೆ ಕಾಯ್ದೆಯಡಿ ಶಿಕ್ಷೆಗೆ ಗುರಿಪಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಶನಿವಾರ ನಡೆದ ಕೋವಿಡ್-19 ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೆಮಿಡಿಸಿವರ್ ಚುಚ್ಚುಮದ್ದು ಸಮಸ್ಯೆ ಎದುರಾಗದಂತೆ ಮುನ್ನೆಚರಿಕೆ ವಹಿಸಬೇಕು. ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ಅನುಗುಣವಾಗಿ ನಿತ್ಯ ಸರಕಾರಕ್ಕೆ ಇಂಡೆಂಟ್ ಸಲ್ಲಿಸಿ ಪೂರೈಕೆ ಖಚಿತ ಪಡಿಸಿಕೊಳ್ಳಬೇಕು. ವೈದ್ಯಕೀಯ ಆಕ್ಸಿಜನ್ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕೈಗಾರಿಕೆಗಳಿಗೆ ನಂತರ ಆದ್ಯತೆಯಲ್ಲಿ ಪೂರೈಸಬಹುದು. ಕೋವಿಡ್ ನಿಯಂತ್ರಣಕ್ಕಾಗಿ ವಿವಿಧ ಕಾರ್ಯಕ್ರಮಗಳಿಗೆ ಸರಕಾರ ವಿಧಿ ಸಿರುವ ಆದೇಶ ಪಾಲನೆ ಮಾಡಬೇಕು ಎಂದರು.
ಉತ್ತರ ಕರ್ನಾಟಕದ ಅನೇಕ ಭಾಗಗಳಿಂದ ಬರುವ ರೋಗಿಗಳಿಗೆ ಕಿಮ್ Õನಲ್ಲಿ ಉತ್ತಮ ಚಿಕಿತ್ಸೆ ನೀಡಿ ಗುಣಮುಖ ಪಡಿಸುತ್ತಿರುವುದರಿಂದ ಜನರಿಗೆ ಕಿಮ್ಸ್ ಬಗ್ಗೆ ಭರವಸೆ ಹೆಚ್ಚಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿಯೂ ಕಿಮ್ಸ್ ವೈದ್ಯರು ಉತ್ತಮ ಸೇವೆ ನೀಡಿ ಕೋವಿಡ್ ಆತಂಕ ದೂರ ಮಾಡಬೇಕು. ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆ, ಕೋವಿಡ್ ಕೇರ್ ಸೆಂಟರ್ ಗಳ ಸ್ಥಾಪನೆ, ಸಂಪರ್ಕ ಪತ್ತೆ, ತಪಾಸಣೆ, ಮತ್ತಿತರ ತಂಡಗಳನ್ನು ಮರುಸ್ಥಾಪಿಸಿ ಕ್ರಿಯಾಶೀಲಗೊಳಿಸಬೇಕು ಎಂದು ಹೇಳಿದರು. ಜಿಲ್ಲಾ ಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 1010 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದರಲ್ಲಿ 293 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ತಲಾ ಶೇ.50 ಈ ರೋಗಿಗಳು ದಾಖಲಾಗಿದ್ದಾರೆ. ಉಳಿದ ಶೇ.70 ಸೋಂಕಿತರು ಮನೆಗಳಲ್ಲಿ ಪ್ರತ್ಯೇಕ ವಾಸವಿದ್ದು ಚಿಕಿತ್ಸೆ ಪಡೆಯುತ್ತಿದ್ದು, ಆಯುಷ್ ಹಾಗೂ ಆರ್‌ಬಿಎಸ್‌ಕೆ ವೈದ್ಯರು ಸೂಕ್ತ ತಿಳಿವಳಿಕೆ ನೀಡುತ್ತಿದ್ದಾರೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ 467 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 483 ಸೇರಿ ಒಟ್ಟು 950 ರೆಮಿಡಿಸಿವರ್ ಚುಚ್ಚುಮದ್ದು ದಾಸ್ತಾನು ಇದೆ. ಕಿಮ್ಸ್ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಂಗ್ರಹವಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇ.50 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಸೂಚಿಸಿದೆ. ಚಿಕಿತ್ಸಾ ಶುಲ್ಕ, ಒದಗಿಸುವ ಹಾಸಿಗೆಗಳ ಸಂಖ್ಯೆ ಪರಿಶೀಲಿಸಲು ಹಿರಿಯ ಅ ಧಿಕಾರಿಗಳನ್ನು ನೋಡಲ್ ಅಧಿ ಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 116 ವೆಂಟಿಲೇಟರ್‌ಗಳು ಲಭ್ಯವಿವೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಸಾವಿನ ಪ್ರಮಾಣ ನೋಡಿದರೆ ದೇಶ ಹಾಗೂ ರಾಜ್ಯದಲ್ಲಿ ಸಾಕಷ್ಟು ಕಡಿಮೆಯಿದೆ. 1.3 ಸಾವಿನ ಪ್ರಮಾಣವಿದೆ. ಜಾಗೃತಿ ಮೂಡಿಸುವ ಕೆಲಸ ಆಗಲಿ. ಮಹಾನಗರ ಪಾಲಿಕೆ ಸ್ವತ್ಛತೆಗೆ ಹೆಚ್ಚು ಒತ್ತು ನೀಡಬೇಕು. ಚಿಕಿತ್ಸೆ, ಲಸಿಕೆ ಹಾಗೂ ಪರೀಕ್ಷೆಗೆ ಯಾವುದೇ ಸಮಸ್ಯೆಯಾಗದಂತೆ ಜಿಲ್ಲಾಡಳಿತ ಎಚ್ಚರ ವಹಿಸಬೇಕು. ಯಾವೊಬ್ಬ ವ್ಯಕ್ತಿಯೂ ಚಿಕಿತ್ಸೆ ದೊರೆಯದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದೆಂದು ಅ ಧಿಕಾರಿಗಳಿಗೆ ಸೂಚಿಸಿದರು. ಶಾಸಕರಾದ ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಎಸ್.ಐ.ಚಿಕ್ಕನಗೌಡ್ರ, ಸವಿತಾ ಅಮರಶೆಟ್ಟಿ, ಈರಣ್ಣ ಜಡಿ, ನಾಗೇಶ ಕಲಬುರ್ಗಿ, ಜಿಪಂ ಸಿಇಒ ಡಾ|ಬಿ. ಸುಶೀಲಾ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಉಪವಿಭಾಗಾಧಿ ಕಾರಿ ಡಾ|ಬಿ. ಗೋಪಾಲಕೃಷ್ಣ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಕಿಮ್ಸ್ ನಿರ್ದೇಶಕ ಡಾ|ರಾಮಲಿಂಗಪ್ಪ ಅಂಟರತಾನಿ, ಡಾ|ಮಹೇಶ್, ಡಿಎಚ್‌ಒ ಡಾ|ಯಶವಂತ ಮದೀನಕರ್, ಡಾ| ಶಿವಕುಮಾರ ಮಾನಕರ್, ಡಾ|ಸುಜಾತಾ ಹಸವಿಮಠ, ಡಾ|ಶಶಿ ಪಾಟೀಲಲ್, ಡಾ|ಎಸ್. ಎಂ.ಹೊನಕೇರಿ, ತಹಶೀಲ್ದಾರ್‌ರಾದ ಶಶಿಧರ ಮಾಡ್ಯಾಳ ಹಾಗೂ ಪ್ರಕಾಶ ನಾಶಿ ಇನ್ನಿತರರಿದ್ದರು.