Advertisement

ಆರಂಭದಲ್ಲಿ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಲಾಗಿತ್ತು, ಈಗ ಪರಿಸ್ಥಿತಿ ಬದಲಾಗಿದೆ: ಶೆಟ್ಟರ್

01:46 PM Jun 21, 2021 | Team Udayavani |

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶಾದ್ಯಂತ ಕೈಗೊಂಡಿರುವ ಕೋವಿಡ್ ಲಸಿಕೆ ಅಭಿಯಾನಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೋಮವಾರ ಚಾಲನೆ ನೀಡಿದರು

Advertisement

ಇಲ್ಲಿನ ಕಾರವಾರ ರಸ್ತೆಯ ಹಳೇ ಸಿ.ಆರ್.ಮೈದಾನದಲ್ಲಿ ಪೊಲೀಸ್ ಕುಟುಂಬ ವರ್ಗದರಿಗಾಗಿ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರಂಭದಲ್ಲಿ ಕೋವಿಡ್ ಲಸಿಕೆ ಬಗ್ಗೆ ಅಪಪ್ರಚಾರ, ಹಲವು ವದಂತಿಗಳಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದರು, ಇದೀಗ ಸ್ಥಿತಿ ಬದಲಾಗಿದೆ ಎಂದರು.

ಇದನ್ನೂ ಓದಿ:ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಕೋವಿಡ್ ಎರಡನೇ ಅಲೆ ತೀವ್ರವಾಗಿ ಹಾನಿ ಉಂಟುಮಾಡಿದ ಬಳಿಕ ಜನರಲ್ಲಿ ಎಚ್ಚರಿಕೆ ಮೂಡಿದೆ.‌ ಲಸಿಕೆ ಪಡೆಯಲು ಮುಂದೆ ಬರುತ್ತಿದ್ದಾರೆ. ಕೇಂದ್ರ ಸರ್ಕಾರವೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಮುಂದೆ ಬಂದಿದೆ.  ಧಾರವಾಡ ಜಿಲ್ಲೆಯಲ್ಲಿ 201 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಲಸಿಕಾ ಮೇಳದ ಆರಂಭದ ದಿನವಾದ ಇಂದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಟ್ಟು 50480 ಲಸಿಕೆ ಲಭ್ಯವಿದ್ದು 27000 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸ್ವತಃ ನಾನು ಕೋವಿಡ್ ಲಸಿಕೆ ಎರಡೂ ಡೋಸ್ ಪಡೆದಿದ್ದೇನೆ. ಯಾವುದೇ ಅಡ್ಡಪರಿಣಾಮ ಉಂಟಾಗಿಲ್ಲ. ಲಸಿಕೆ‌ ನಿಮ್ಮನ್ನು ಕೋವಿಡ್‌ನಿಂದ ರಕ್ಷಿಸುತ್ತದೆ. ಪೊಲೀಸ್ ಆಯುಕ್ತ ಬೇಡಿಕೆಯಂತೆ ಪೊಲೀಸ್ ಕುಟುಂಬ ವರ್ಗದವರಿಗೂ ಇಂದು ಲಸಿಕೆ ಹಾಕಲಾಗುತ್ತಿದೆ. ಸಂಜೆ ವೇಳೆ 1000 ಜನರು ಲಸಿಕೆ ಪಡೆಯುವ ವಿಶ್ವಾಸವಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Advertisement

ಶಾಸಕ ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್.ಸಿ.ಹೆಚ್.ಓ ಡಾ.ಎಸ್.ಎಮ್.ಹೊನಕೇರಿ‌ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next