Advertisement

Sagara: ಸಚಿವ ಜಮೀರ್ ಅಹ್ಮದ್ ವಜಾ; ಬಿಜೆಪಿ ಮನವಿ

03:07 PM Nov 18, 2023 | Kavyashree |

ಸಾಗರ: ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ನ.18ರ ಶನಿವಾರ ಬಿಜೆಪಿ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Advertisement

ರಾಜ್ಯದ ವಸತಿ ಸಚಿವ ಜಮೀರ್ ತೆಲಂಗಾಣದ ಚುನಾವಣಾ ಪ್ರಚಾರ ಸಭೆಯಲ್ಲಿ ಸಾಂವಿಧಾನಿಕ ಸ್ಪೀಕರ್ ಹುದ್ದೆಗೆ ಧರ್ಮದ ಲೇಪನ ಹಚ್ಚಿ ತಮ್ಮ ಸಾಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡಿಕೊಳ್ಳುವ ಜೊತೆಗೆ ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ. ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದು ಜಮೀರ್ ಅಹ್ಮದ್ ನೀಡಿರುವ ಇಂತಹ ಹೇಳಿಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಸಾಧ್ಯತೆ ಇದೆ. ರಾಜ್ಯದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಹೇಳಿಕೆ ನೀಡಿರುವ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಇನ್ನಷ್ಟು ಉಗ್ರವಾದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಜಮೀರ್ ಅಹ್ಮದ್ ಮಾತಿನ ಮೇಲೆ ಹಿಡಿತ ಇರಿಸಿಕೊಳ್ಳಬೇಕು. ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ. ಹಿಂದಿನ ಸರ್ಕಾರ ನೀಡಿರುವ ಎಲ್ಲ ಅನುದಾನವನ್ನು ವಾಪಾಸ್ ಪಡೆದು ಅಭಿವೃದ್ಧಿ ಹಿನ್ನಡೆಗೆ ಕಾರಣವಾಗಿದೆ. ಜನರ ದೃಷ್ಟಿಯನ್ನು ಬದಲಾಯಿಸಬೇಕು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಜಮೀರ್ ಅಹ್ಮದ್ ಮೂಲಕ ಇಂತಹ ಹೇಳಿಕೆಗೆ ಪ್ರಚೋದನೆ ನೀಡಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ತಕ್ಷಣ ಜಮೀರ್ ಅಹ್ಮದ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಮಧುರಾ ಶಿವಾನಂದ್, ವಿ.ಮಹೇಶ್, ಭಾವನಾ ಸಂತೋಷ್, ಸವಿತಾ ವಾಸು, ಉಷಾ, ಲಿಂಗರಾಜ್ ಬಿ.ಎಚ್., ಕೃಷ್ಣ ಶೇಟ್, ಪ್ರೇಮಾ ಸಿಂಗ್, ಸರೋಜಮ್ಮ, ಮೈತ್ರಿ ಪಾಟೀಲ್, ಸತೀಶ್ ಕೆ., ಪರಶುರಾಮ್, ಸತೀಶಬಾಬು, ವಿನೋದರಾಜ್, ಪ್ರದೀಪದ್, ಉಮೇಶ್ ಚೌಟಗಿ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next