Advertisement

ಸಚಿವೆ ಜಯಮಾಲಾ ಭರವಸೆ: ಪ್ರತಿಭಟನೆ ವಾಪಸ್‌

08:20 AM May 31, 2019 | Lakshmi GovindaRaj |

ಬೆಂಗಳೂರು: ಸರ್ಕಾರಿ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನು ವಿರೋಧಿಸಿ ಮತ್ತು ಎಲ್‌ಕೆಜಿ, ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಸಚಿವೆ ಡಾ.ಜಯಮಾಲಾ ಭೇಟಿ ನೀಡಿ ಮಾತುಕತೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಅವರು, “ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ 45 ಸಾವಿರ ಕೋಟಿ ರೂ. ಕೃಷಿ ಸಾಲ ಮಾಡಿದ್ದಾರೆ. ಇಂತಹ ಸಂದರ್ಭದಲ್ಲೂ ಅಂಗನವಾಡಿ ಕಾರ್ಯಕರ್ತೆಯರನ್ನು ಕಡೆಗಣಿಸಿಲ್ಲ. 500ರೂ. ಸಹಾಯಧನ ಹೆಚ್ಚಳ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುತ್ತಾರೆ’ ಎಂದು ಭರವಸೆ ನೀಡಿದರು.

“ಅಂಗನವಾಡಿ ಶಿಕ್ಷಕಿಯರನ್ನು ಅಂಗನವಾಡಿ ಕಾರ್ಯಕ್ರಮಗಳಿಗೆ ಹೊರತುಪಡಿಸಿ ಬೇರೆ ಕೆಲಸಗಳಿಗೆ ಬಳಸಿಕೊಳ್ಳದಂತೆ ಸೂಚನೆ ನೀಡಲಾಗುವುದು. ಅಂಗನವಾಡಿಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಹತೆಗೆ ಅನುಗುಣವಾಗಿ ಪೂರ್ವ ಪ್ರಾಥಮಿಕ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಶಿಕ್ಷಕಿಯರನ್ನಾಗಿ ನೇಮಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಗಳನ್ನು ಹಂತ ಹಂತವಾಗಿ ಈಡೇರಿಸಲಾಗು ವುದು. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲು ಸಭೆ ನಡೆಸುವುದಾಗಿ ಸಚಿವೆ ಜಯಮಾಲಾ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆದಿದ್ದೇವೆ. ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next