Advertisement

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

11:19 PM Nov 15, 2024 | Team Udayavani |

ಬೆಂಗಳೂರು: ಮೈಸೂರು ಜಿಲ್ಲೆ ಎಚ್‌.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ಹೋಗಿ ಬರುವುದಕ್ಕೆ ಬಂಡೀಪುರದ ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸಬಾರದು ಎಂದು ನಿರ್ಬಂಧ ಹೇರಿ ಹೊರಡಿಸಲಾದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪುತ್ರ ರಾಣಾ ಜಾರ್ಜ್‌ ಸಲ್ಲಿಸಿರುವ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ರಾಣಾ ಜಾರ್ಜ್‌ ಸಲ್ಲಿಸಿರುವ ಅರ್ಜಿಯು ನ್ಯಾ| ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಹಾಗೂ ಹೆಡಿಯಾಳ ಉಪ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next