Advertisement

ಕಾವೇರಿ ಕಣಿವೆಯಲ್ಲಿ 30,524 ಕಾಮಗಾರಿ

07:32 PM Apr 03, 2021 | Team Udayavani |

ಮೈಸೂರು: ಆರ್ಟ್‌ ಆಫ್ ಲೀವಿಂಗ್‌ ಸ್ವ ಇಚ್ಛೆಯಿಂದ ಕಾವೇರಿ ಕಣಿವೆಯಲ್ಲಿ ಅಂತರ್ಜಲ ಚೇತನ ಯೋಜನೆಯಡಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಒಟ್ಟು 30,524 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸರ್ಕಾರದೊಂದಿಗೆ ಒಡಂಬಡಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

Advertisement

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಆರ್ಟ್‌ ಆಫ್ ಲೀವಿಂಗ್‌ ಕಾಮಗಾರಿಗೆ ಬೇಕಾದ ಅನುದಾನವನ್ನು ಸಂಪೂರ್ಣವಾಗಿ ಭರಿಸಲಾಗುವುದು. ಒಟ್ಟು 206 ಮರು ಪೂರಣ ಘಟಕ, 14,703 ಇಂಗುಗುಂಡಿ, 304 ಡೆಕ್ಸ್‌, 201 ಕೆರೆಗಳ ಅಭಿವೃದ್ಧಿ, 14,909 ಬೋಲ್ಡರ್‌ ಚೆಕ್ಸ್‌, 201 ಅರಣ್ಯೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಕಾಮಗಾರಿ ನಡೆಯುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕರ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಿ ಮಳೆಗಾಲಕ್ಕೂ ಮುನ್ನವೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಗ್ರಾಪಂ ವ್ಯಾಪ್ತಿಯಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ಕೆರೆಗಳಿಗೆ ನೀರು ಹರಿಯುವ ಕಾಲುವೆಗಳ ಪುನಶ್ಚೇತನ, ಹೂಳು ತೆಗೆಯುವುದು, ಕೆರೆ ಏರಿ ದುರಸ್ತಿ, ಕೆರೆ ಕೊಡಿ, ಬದು ನಿರ್ಮಾಣ, ದೇವಸ್ಥಾನಗಳ ಬಳಿ ಇರುವ ಕಲ್ಯಾಣಿಗಳ ಪುನಶ್ಚೇತಗೊಳಿಸಲಾಗುವುದು. ಈ ಜಲಶಕ್ತಿ ಅಭಿಯಾನದ ಮೂಲಕ ಮುಂಗಾರು ಪ್ರಾರಂಭವಾಗುವ ಮೊದಲೇ ನೀರು ಸಂಗ್ರಹಣೆ ಮಾಡಬಹುದಾಗ ಜಾಗಗಳನ್ನು ಗುರುತಿಸುವ ಕಾರ್ಯ ನಡೆಯಿದೆ. ಇದರಿಂದ ಅಂತರ್ಜಲ ವೃದ್ಧಿಗೆ ಇದು ನೆರವಾಗಲಿದೆ ಎಂದರು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಪಂ ಸಿಇಒ ಎ.ಎಂ. ಯೋಗೀಶ್‌ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next