ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನಿರಾಕರಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ಎಲ್ಲ ಸಚಿವರ ಸಭೆ ನಡೆಸಿದ್ದಾರೆ. ಆಯಾ ಇಲಾಖೆಗಳ ಪ್ರಗತಿ ಮತ್ತು ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದು ಕೊಂಡಿದ್ದಾರೆ ಎಂದರು.
ಇದನ್ನೂ ಓದಿ:ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು
ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಪರಿಹಾರ ಘೋಷಣೆಯ ಬಗ್ಗೆ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆ ಪಕ್ಷದ ಕೋರ್ ಕಮಿಟಿ ಸಭೆಯಿದ್ದು ಅದರಲ್ಲಿ ಭಾಗವಹಿಸುವದಾಗಿ ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆಗೆ ಶಾಸಕರು ಪ್ರಯತ್ನ ನಡೆಸಿದ್ದಾರೆಯೇ ಎಂಬ ಪ್ರಶ್ನೆಗೆ ಈಶ್ವರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.