ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಸಚಿವ ಕೆ. ಸುಧಾಕರ್ ಪ್ರಶ್ನಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಪಶ್ನಿಸಿದ್ದಾರೆ.
ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಬಿಜೆಪಿಯವರ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಈ ರೀತಿ ಕೆಲಸ ಮಾಡಿದರೆ ನಾವು ಬಿಜೆಪಿಯ ವಿರುದ್ಧ ಅಲ್ಲ ಪೋಲೀಸರ ವಿರುದ್ಧ ಹೋರಾಟ ಮಾಡಬೇಕಾಗಬಹುದು ಎಚ್ಚರಿಕೆ ಇರಲಿ ಎಂದು ಡಿ.ಕೆ. ಶಿವಕುಮಾರ್ ಗುರುವಾರ ಕಿಡಿಕಾರಿದ್ದರು.
ಇದನ್ನೂ ಓದಿ: ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಮಾತೃ ವಿಯೋಗ
ಬೆಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ಪಾರ್ಟಿಯನ್ನು ಫಿಕ್ಸ್ ಮಾಡಬೇಕು ಎಂದು ಪ್ರಯತ್ನಗಳು ನಡೆಯುತ್ತಿದೆ ಹಾಗಾಗಿ ಪೊಲೀಸರು ಬಿಜೆಪಿಯ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಬಾರದು. ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್ ಎಂದು ಗುಡುಗಿದ ಡಿಕೆ ಶಿವಕುಮಾರ್ ಇದನ್ನು ಮನವಿಯಾದರು ಅಂದುಕೊಳ್ಳಿ ಅಥವಾ ಎಚ್ಚರಿಕೆ ಅಂತನೂ ಅಂದುಕೊಳ್ಳಿ ಎಂದು ಡಿಕೆಶಿ ಹೇಳಿದ್ದರು.