Advertisement

ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ ಇದೆ, ಇದು ರಾಜಕೀಯ ಪ್ರೇರಿತ ಯತ್ನ: ಸುಧಾಕರ್‌

04:51 PM Aug 24, 2022 | Team Udayavani |

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕ್ಷಣದಿಂದ ಏನೇನೋ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಭ್ರಷ್ಟಾಚಾರ ನಡೆಸಿ ಜನರಿಂದ ಕಿತ್ತೊಗೆಯಲ್ಪಟ್ಟ ಕಾಂಗ್ರೆಸ್‌, ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣನವರು ವಯಸ್ಸಲ್ಲಿ ಹಾಗೂ ಅನುಭವದಲ್ಲಿ ಹಿರಿಯರು. ಅವರು ಬಯಸಿದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿ ಅವರ ಸಲಹೆ, ದೂರು, ಅಹವಾಲುಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರು ಕೊಟ್ಟ ಸಲಹೆಗಳನ್ನೂ ಜಾರಿ ಮಾಡಿದ್ದಾರೆ.  ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವ ಸರ್ಕಾರವೂ ಇಂತಹ ಉತ್ತಮ ಕ್ರಮವನ್ನು ಜಾರಿ ಮಾಡಿಲ್ಲ. ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್‌ಗಳನ್ನು ವಿಲೇವಾರಿ ಮಾಡಲಾಗಿದೆ. ಇದುವರೆಗೆ ಕೆಂಪಣ್ಣ  ದೇವರಂತೆ ಇದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಏನಾಯ್ತು ಎಂದು ಗೊತ್ತಿಲ್ಲ. ಅವರಿಬ್ಬರ ನಡುವೆ ಏನು ಚರ್ಚೆಯಾಗಿದೆ ಹಾಗೂ ಚರ್ಚೆ ಬಳಿಕ ಏಕೆ ಹೇಳಿಕೆ ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಕಲಬುರಗಿ: ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿ ತಪ್ಪಿಸಲು ಯತ್ನ,ಗುಂಡು ಹಾರಿಸಿ ದರೋಡೆಕೋರರ ಬಂಧನ

ಕೆಂಪಣ್ಣ ಅವರಿಗೆ ಇನ್ನೂ ಏನಾದರೂ ಸಹಾಯ ಮಾಡಬೇಕೆಂದರೆ ಸರ್ಕಾರ ಆ ಕೆಲಸ ಮಾಡಲು ಸಿದ್ಧವಿದೆ. ಅವರಿಗೆ ಸಾಮಾಜಿಕ ಕಳಕಳಿ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಿತ್ತು. ಆದರೆ ಇವೆಲ್ಲ ಕಾಂಗ್ರೆಸ್‌ ಸ್ಪಾನ್ಸರ್‌ ಆಗಿದ್ದು, ಇದನ್ನೇ ಚುನಾವಣೆಯ ಅಜೆಂಡಾ ಮಾಡಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ ಭ್ರಷ್ಟಾಚಾರ ಮಾಡಿದ್ದಕ್ಕೆ ಜನರು ಅವರನ್ನು ಇಡೀ ದೇಶದಿಂದ ಕಿತ್ತೊಗೆದಿದ್ದಾರೆ. ಈಗ ಬಿಜೆಪಿಯ ಪ್ರಾಮಾಣಿಕತೆಗೆ ತಿರುಮಂತ್ರ ಹಾಕಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‌ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟು ಮಾಡಿ ಮತ ಕೇಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next