Advertisement
ಡಾ.ಭರತ್ ಶೆಟ್ಟಿ ಹಾಗೂ ಗುರುರಾಜ್ ಗಂಟಿಹೊಳಿ ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಪಶು ವೈದ್ಯಾಧಿಕಾರಿಗಳ ಅನುಪಾತ ಕಡಿಮೆ ಇದೆ. ಅದನ್ನು ಸರಿಪಡಿಸಲಾಗುವುದು. ಮುಂದಿನ 2 ತಿಂಗಳು ಅವಧಿಯಲ್ಲಿ 200 ಪಶು ಇನ್‌ಸ್ಪೆಕ್ಟರ್‌ಗಳು ಹಾಗೂ ಡಿಸೆಂಬರ್ ಅಂತ್ಯದ ವೇಳೆಗೆ 400 ಪಶು ವೈದ್ಯರ ನೇಮಕ ಮಾಡಲಾಗುವುದು. ಸದ್ಯಕ್ಕೆ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ವೈದ್ಯರನ್ನು ವರ್ಗಾವಣೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
Related Articles
Advertisement
ಹೊಸ ತಾಲೂಕು ರಚನೆಗೆ ಮಾನದಂಡವಿಧಾನಸಭೆ : ಇನ್ನು ಮುಂದೆ ಹೊಸ ತಾಲೂಕು ರಚನೆಗೆ ಸೂಕ್ತ ಮಾನದಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವಾಗಿ ರಚಿಸುವ ಕುರಿತು ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸ್ವೀಕೃತವಾಗುವುದಿಲ್ಲ. ಡಾ.ಎಂ.ಬಿ.ಪ್ರಕಾಶ್ ಸಮಿತಿ ತಾಲೂಕು ಕೇಂದ್ರವನ್ನಾಗಿ ಮಾಡಲು ಶಿಫಾರಸು ಮಾಡಿದೆ. ಆದರೆ ಇನ್ನು ಮುಂದೆ ಹೊಸ ತಾಲೂಕು ಕೇಂದ್ರ ರಚನೆಗೆ ಕೆಲವು ಮಾನದಂಡ ವಿಧಿಸಲಾಗುವುದು. ಆ ಸಂದರ್ಭದಲ್ಲಿ ಪರಶುರಾಂಪುರ ತಾಲೂಕು ಕೇಂದ್ರವನ್ನಾಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು. ಆದರೆ ಇದಕ್ಕೆ ತೃಪ್ತರಾಗದ ರಘುಮೂರ್ತಿ, ಪರಶುರಾಂಪುರ ಹೋಬಳಿ ಘೋಷಣೆಯಾಗಲೇಬೇಕು. ನಮ್ಮ ಸರ್ಕಾರ ಬೇರೆ ಬೇರೆ ಯೋಜನೆ ಘೋಷಣೆ ಮಾಡುತ್ತಿದೆ. ಆದರೆ ನಮ್ಮ ಕ್ಷೇತ್ರದ ಬಹುಕಾಲದ ಬೇಡಿಕೆಯನ್ನು ಈಡೇರಿಸಲ್ಲ. 2028 ರೊಳಗೆ ತಾಲೂಕು ರಚನೆಯಾಗದಿದ್ದರೆ ಸಕ್ರಿಯ ರಾಜಕಾರಣದಲ್ಲಿ ಇರುವ ಬಗ್ಗೆ ನಾವು ಯೋಚನೆ ಮಾಡಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಫಸಲ್ ಬಿಮಾ ಯೋಜನೆಯಿಂದ ರಾಜ್ಯ ಹೊರಕ್ಕೆ?
ವಿಧಾನಸಭೆ: ಫಸಲ್ ಬಿಮಾ ಯೋಜನಾ ವ್ಯಾಪ್ತಿಯಿಂದ ರಾಜ್ಯ ಹೊರಗೆ ಬರಬೇಕೇ , ಬೇಡವೇ? ಎಂಬ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದ್ದಾರೆ. ಫಸಲ್ ಬಿಮಾ ಯೋಜನೆಯ ಸರ್ವರ್ ಕೆಟ್ಟಿದ್ದು, ರೈತರಿಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಕಷ್ಟವಾಗುತ್ತಿದೆ. ಕೇಂದ್ರದಿಂದ ಈ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಖಾಸಗಿ ವಿಮಾ ಕಂಪನಿಗಳಿಗೆ ಅನುಕೂಲವಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಉತ್ತರಿಸಿದ ಅವರು, ಗುಜರಾತ್ ಸೇರಿ ಅನೇಕ ರಾಜ್ಯಗಳು ಈ ಯೋಜನೆಯ ವ್ಯಾಪ್ತಿಯಿಂದ ಹೊರಕ್ಕೆ ಬಂದಿವೆ. ಸರ್ಕಾರ ಈ ವಿಚಾರದಲ್ಲಿ ಏನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ನೋಂದಣಿ ದಿನಾಂಕ ವಿಸ್ತರಿಸುವುದಕ್ಕೆ ಕೇಂದ್ರ ಸರ್ಕಾರ ನಿಯೋಜಿತ ಅಧಿಕಾರಿಗಳಿಂದ ಒಪ್ಪಿಗೆ ಬೇಕಾಗುತ್ತದೆ. ಒಂದು ದಿನ ಮಾತ್ರ ವಿಸ್ತರಣೆ ಮಾಡಿದ್ದರಿಂದ 30 ಸಾವಿರ ರೈತರು ವಿಮೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಅಡಕೆಯನ್ನು ಹವಾಮಾನಾಧಾರಿತ ಬೆಳೆಗಳ ವ್ಯಾಪ್ತಿಯಿಂದ ಕೈ ಬಿಟ್ಟಿರುವ ಬಗ್ಗೆ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಅಶೋಕ್ ಕುಮಾರ್ ರೈ ಸರ್ಕಾರದ ಗಮನ ಸೆಳೆದರು.