Advertisement
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಕಾವೇರಿ ನಿಗಮದ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
Related Articles
ತಾಲೂಕಿನ ಮುತ್ತಿನ ಮುಳುಸೊಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಪಿರಿಯಾಪಟ್ಟಣ ತಾಲೂಕಿನ ಕೆಲವು ಪ್ರದೇಶ ಈ ಹಿಂದೆ ಬರಪೀಡಿತವಾಗಿದ್ದು, ಸುಮಾರು 79 ಗ್ರಾಮಗಳ ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವುದು ಕಂಡುಬರುತ್ತದೆ. ಪಿರಿಯಾಟ್ಟಣ ತಾಲೂಕಿನ ಸ್ವಲ್ಪ ಭಾಗವು ಅರೆಮಲೆನಾಡು ಪ್ರದೇಶವಾಗಿದ್ದರೂ ಸಹ ಕೆಲವು ಹಳ್ಳಿಗಳಲ್ಲಿ ಮಳೆಯ ಕೊರತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಾಗಿರುತ್ತದೆ. ಈ ಭಾಗದಲ್ಲಿ ಸರಕಾರವು ಹಲವಾರು ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಸಹ ನೀರಿಕ್ಷಿತ ನೀರಿನ ಪ್ರಮಾಣ ದೊರಕುತ್ತಿಲ್ಲ. ಅಲ್ಲದೇ ಖಾಸಗಿ ಕೊಳವೆ ಬಾವಿಗಳು ಅಂತರ್ಜಲದ ಕೊರತೆಯಿಂದ ಬತ್ತಿಹೋಗುತ್ತಿದೆ.
Advertisement
ಈ ಪರಿಸ್ಥಿತಿಯನ್ನು ಅವಲೋಕಿಸಿದ ಕೆ.ವೆಂಕಟೇಶ್ ರವರು ಸದರಿ ಗ್ರಾಮಗಳ ವ್ಯಾಪ್ತಿಯ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಹಾಗೂ ಇತ್ಯಾದಿ ಪೂರೈಕೆಗಳ ಸೌಲಭ್ಯ ಕಲ್ಪಿಸುವ ಪ್ರಯುಕ್ತ ಪಿರಿಯಾಪಟ್ಟಣ ತಾಲೂಕಿನ ಒಳನಾಡು ಪ್ರದೇಶ ವ್ಯಾಪ್ತಿಯಲ್ಲಿ ಬರುವ 79 ಗ್ರಾಮಗಳ ಕೆರೆಗಳಿಗೆ ಕಾವೇರಿ ನದಿಯಿಂದ ಸುಮಾರು 133 ಕೆರೆ ಮತ್ತು 17 ಕಟ್ಟೆಗಳು ಸೇರಿ 150 ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿದ್ದರು.
0.828 ಟಿ.ಎಂ.ಸಿ ನೀರು ಬಳಕೆಈ ಯೋಜನೆಯ ಪ್ರಕಾರ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳುಸೊಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ಮಳೆಗಾಲದ ಸಮಯದಲ್ಲಿ (ಸುಮಾರು ಮೂರುವರೆ ತಿಂಗಳು) ಏರು ಕೊಳವೆ ಮೂಲಕ ನೀರೆತ್ತಿ, ದೇಪೂರ ಗ್ರಾಮದ ಯೋಜಿತ ವಿತರಣಾ ತೊಟ್ಟಿ ನಂತರ ಎಡಭಾಗದ ಮತ್ತು ಬಲಭಾಗದ ಗುರುತ್ವಾಕರ್ಷಣೆಯ ಪೈಪ್‌ಲೈನ್ ಮುಖಾಂತರ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಸುಮಾರು 0.828 ಟಿ.ಎಂ.ಸಿ (95 ಕ್ಯೂಸೆಕ್ಸ್) ನೀರು ಯೋಜನೆಗೆ ಬೇಕಾಗುತ್ತದೆ. ಈ 0.828 ಟಿ.ಎಂ.ಸಿ ನೀರನ್ನು ಕಾವೇರಿ ನದಿಯಿಂದ ತೆಗೆದುಕೊಳ್ಳಲು ಅನುಮತಿ ಪಡೆಯಲಾಗಿದೆ. 11.464 ಮೀಟರ್ ಕಾಲುವೆ
ಮುತ್ತಿನ ಮುಳ್ಳುಸೋಗೆ ಗ್ರಾಮದಿಂದ ಆರಂಭವಾಗಿ ಬಲದಂಡೆ ಮತ್ತು ಎಡದಂಡೆಗಳನ್ನು ನಿರ್ಮಿಸಿಕೊಂಡು 125 ಕೀ.ಮಿ ಉದ್ದದ ಈ ಯೋಜನೆಗಾಗಿ 11.464 ಮೀಟರ್ ನೀರಿನ ಕಾಲುವೆ ನಿರ್ಮಾಣವಾಗಲಿದೆ. 100 ಅಡಿ ಎತ್ತರದಿಂದ ಕೆರೆಗಳಿಗೆ ಕುಡಿಯುವ ನೀರು ತುಂಬಿಸಲಾಗುತ್ತದೆ. ಇದರಿಂದ ತಾಲೂಕಿನ ಕೆಲವು ಉಳಿದ ಕೆರೆಗಳಿಗೆ ಕಾವೇರಿ ನದಿ ಪಾತ್ರದಿಂದ ಪ್ರತಿ ವರ್ಷ 0.85 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಬೃಹತ್ ಯೋಜನೆಗಾಗಿ ಸರ್ವೆ ಕಾರ್ಯವನ್ನು ಜಿಯೋಸ್ಟಿಂ ಎಂಬ ಕಂಪನಿಯ ವತಿಯಿಂದ ಡಿಜಿಟಲ್ ಸರ್ವೆ ಮಾಡಲಾಗಿದ್ದು, ಆಲನಹಳ್ಳಿ, ಚೌಡೇನಹಳ್ಳಿ, ನಂದಿನಾಥಪುರ ಮಾರ್ಗವಾಗಿ ಪಿರಿಯಾಪಟ್ಟಣಕ್ಕೆ ಕೊನೆಯಾದರೆ ಮತ್ತೊಂದು ನಾಲೆ ಕಂಪಲಾಪುರದಲ್ಲಿ ಅಂತ್ಯಗೊಳ್ಳುತ್ತದೆ. ಪಿ.ಎನ್.ದೇವೇಗೌಡ ಪಿರಿಯಾಪಟ್ಟಣ