Advertisement
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು, ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ ಎಂದು ಖಂಡ್ರೆ ಹೇಳಿದರು.
Related Articles
Advertisement
ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಅರಣ್ಯ ಸಚಿವರಿಗೆ ಕೆಲವು ತಪ್ಪು ಕಲ್ಪನೆ ಇದೆ. ಇದನ್ನು ಇತ್ತೀಚೆಗೆ ನಾನು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹರಿಸಲು ಪ್ರಯತ್ನಿಸಿದ್ದೇವೆ. ಬ್ಯಾರಿಕೇಡ್ ನಿರ್ಮಾಣಕ್ಕೆ ಏಕೆ ಇಷ್ಟು ವೆಚ್ಚ ಮಾಡುತ್ತೀರಿ ಎಂಬುದು ಅವರ ಪ್ರಶ್ನೆಯಾಗಿದೆ. ಆದರೆ ಮಾನವನ ಜೀವ ಅಮೂಲ್ಯವಾದ್ದು, ಎಷ್ಟೇ ಹಣ ಕೊಟ್ಟರೂ ಅದು ಮರಳಿ ಬರುವುದಿಲ್ಲ. ನಾವು ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ ತಡೆದರೆ ಈ ಅಮೂಲ್ಯ ಜೀವ ಉಳಿಸಬಹುದು ಎಂದು ಅವರಿಗೆ ಮನವರಿಕೆ ಮಾಡಿಸಿದ್ದೇನೆ ಎಂದು ವಿವರಿಸಿದರು.
ಖಾಲಿ ಹುದ್ದೆ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಭೂ ಮಾಪಕರ ಕೊರತೆ: ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ. ಭೂಮಾಪಕರ ಕೊರತೆಯಿಂದ ಇದು ತಡವಾಗಿದೆ. ಅಧಿವೇಶನದ ವೇಳೆ ಕಂದಾಯ ಸಚಿವರೊಂದಿಗೆ ಸಭೆ ನಡೆಸಿ, ಖಾಸಗಿ ಭೂಮಾಪಕರ ನೆರವು ಪಡೆದು 6 ತಿಂಗಳೊಳಗೆ ಜಂಟಿ ಸರ್ವೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದರು.
ಅರಣ್ಯ ವ್ಯಾಪ್ತಿ ಹೆಚ್ಚಳ: ರಾಜ್ಯದಲ್ಲಿ 1 ಲಕ್ಷ 2 ಸಾವಿರ ಹೆಕ್ಟೇರ್ ಹಸಿರು ವ್ಯಾಪ್ತಿ (ಗ್ರೀನ್ ಕವರ್) ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸಮೀಕ್ಷಾ ವರದಿ ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ ಶೇ.21ರಷ್ಟು ಹಸಿರು ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸುವುದು ತಮ್ಮ ಗುರಿ ಎಂದರು.
ವನಮಹೋತ್ಸವ: ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ. ಈ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸಲಾಗುವುದು ಎಂದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ 3 ವರ್ಷದಲ್ಲಿ ನೆಟ್ಟ ಗಿಡಗಳ ಪೈಕಿ ಶೇ.50-60ರಷ್ಟು ಉಳಿದಿವೆ ಎಂದು ತಿಳಿಸಲಾಗಿದೆ. ಈ ಬಾರಿ ನೆಡಲಾಗುವ ಸಸಿಗಳ ಜಿಯೋ ಟ್ಯಾಗ್ ಮಾಡಲಾಗುತ್ತಿದ್ದು, ಕನಿಷ್ಠ ಶೇ.80ರಷ್ಟು ಸಸಿ ಉಳಿಸಲು ಪ್ರಯತ್ನಿಸಲಾಗುವುದು ಎಂದರು.