Advertisement

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

02:47 PM Nov 20, 2021 | Team Udayavani |

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭದಲ್ಲಿದ್ದರು.

ಹಿರಿಯರ ಆಶೀರ್ವಾದ
ಸಚಿವ ಶ್ರೀನಿವಾಸ ಪೂಜಾರಿ ಅವರು ನಾಮಪಾತ್ರ ಸಲ್ಲಿಸುವ ಮುನ್ನ ಉಡುಪಿಯ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಭಟ್ ಅವರು ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next