ಬ್ರಹ್ಮಾವರ: ರಾಜ್ಯದಲ್ಲಿ ಒಟ್ಟು 16 ಲಕ್ಷ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಬೇಕಿದೆ. ಉಡುಪಿ ಜಿಲ್ಲೆಯಲ್ಲಿ 95 ಸಾವಿರ ಮಂದಿ ವಿದ್ಯಾರ್ಥಿಗಳಿದ್ದು ಎರಡು ದಿನಗಳಲ್ಲಿ 20 ಸಾವಿರ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಪೂರ್ಣಗೊಳ್ಳಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಇಂದು ಕೋಟ-ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: ಕೋಡಿ ಗ್ರಾ.ಪಂ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆ; ಅಭಿವೃದ್ಧಿ ಕುರಿತು ಚರ್ಚೆ
ವಿದ್ಯಾರ್ಥಿಗಳಿಗೆ ಲಸಿಕೆ ಪೂರ್ಣಗೊಂಡ ಮೇಲೆ ಶೀಘ್ರವಾಗಿ ಪದವಿ ಕಾಲೇಜುಗಳು ಕಾರ್ಯಚರಿಸಲಿದೆ ಎಂದರು.
ಕಾಲೇಜು ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವಿಶ್ವನಾಥ ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಹಂತ-ಹಂತವಾಗಿ ದೇಗುಲಗಳನ್ನು ತೆರೆಯಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ