ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆೆ ಮಾಡಿಸಿಕೊಂಡಿದ್ದಾರೆ.
ನ.15ರಂದು ಶಸ್ತ್ರಚಿಕಿತ್ಸೆ ಮುಗಿದ್ದು, ಈಗ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ವೈದ್ಯರ ಸಲಹೆಯಂತೆ 4-5 ದಿನ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗೆ ನನ್ನ ಆಪ್ತ ಸಹಾಯಕರಕನ್ನು ಅಥವಾ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೂರ್ನಾಲ್ಕು ದಿನದ ಹಿಂದೆ ಒಂದೇ ದಿನದಲ್ಲಿ ಸುದೀರ್ಘ ಪ್ರವಾಸ ಮಾಡಿದ್ದೆ. ಬಳ್ಳಾರಿ, ಬೆಳಗಾವಿ, ಅಥಣಿ ಹೀಗೆ ಸುಮಾರು 1500 ಕಿ.ಮೀ. ಪ್ರವಾಸ ವಾಪಸ್ ಆಗುವ ಸಂದರ್ಭದಲ್ಲಿ ವಿಪರೀತ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿದೆ. ಕೂಡಲೇ ಶಸ್ತ್ರಚಿಕಿತ್ಸೆಗೆ ಒಳಪಡಿಸಿಬೇಕು ಎಂದು ಸಲಹೆ ನೀಡಿದರು. ಅದರಂತೆ ಸಣ್ಣ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಸದ್ಯ ಆರಾಮಾಗಿದ್ದೇನೆ ಎಂದು ‘ಉದಯವಾಣಿ’ಗೆ ತಿಳಿಸಿದರು.