Advertisement
ಮಂಗಳೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಅಸ್ಪೃಶ್ಯತೆ ಮುಕ್ತ ಗ್ರಾ. ಪಂ. ರಚನೆಗೆ ಈ ಅಭಿಯಾನ ನಾಂದಿಯಾಗಲಿದೆ ಎಂದರು.
Related Articles
ಯಲ್ಲಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಪಂಡಿತ್ ದೀನ್‌ದಯಾಳ್ ಹೆಸರಿನಲ್ಲಿ ರಾಜ್ಯದ ಐದು ಕಡೆಗಳಲ್ಲಿ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು. ಒಂದು ಶಿಕ್ಷಣ ಕೇಂದ್ರದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯಲಿದ್ದು, ವಿಶ್ವವಿದ್ಯಾನಿಲಯಗಳನ್ನು ಗುರಿಯಾಗಿಸಿ ವಿ.ವಿ. ಆವರಣಗಳಲ್ಲೇ ಇದನ್ನು ಸ್ಥಾಪಿಸಲು ಚಿಂತಿಸಲಾಗಿದೆ. ಈ ವಸತಿ ನಿಲಯಗಳಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ,ಅಲ್ಪಸಂಖ್ಯಾಕ ಹಾಗೂ ಮೀಸಲಾತಿ ಇಲ್ಲದ ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಮಂಗಳೂರು, ಶಿವಮೊಗ್ಗ, ಮೈಸೂರು, ಧಾರವಾಡ ಹಾಗೂ ದಾವಣಗೆರೆಗಳಲ್ಲಿ ಈ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದರು.
Advertisement
ಕನಕದಾಸ ವಸತಿ ನಿಲಯಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾದ ಕನಕದಾಸ ವಸತಿ ನಿಲಯಗಳನ್ನು ರಾಜ್ಯದ 50 ಕಡೆಗಳಲ್ಲಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. 175 ಕೋಟಿ ರೂ. ವೆಚ್ಚದಲ್ಲಿ ಈ ವಸತಿ ನಿಲಯಗಳು ಸ್ಥಾಪನೆಯಾಗಲಿವೆ. ಅಂಬೇಡ್ಕರ್ ನಿಗಮ ಮೂಲಕ 350 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಡೆಗಳಲ್ಲಿ 100 ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು. ಮಂಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡಗಳಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ನಾರಾಯಣಗುರು ಹೆಸರಿನಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು. ಪ್ರತಿ ವಸತಿ ಶಾಲೆಗೆ 29 ಕೋ ರೂ. ಮೀಸಲಿರಿಸಲಾಗಿದೆ. ಇವೆಲ್ಲವೂ ಕಾರ್ಯಗತವಾದರೆ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕೊರತೆ ನೀಗಲಿದೆ ಎಂದರು.