ಬೆಂಗಳೂರು: ತಲಕಾವೇರಿಯಲ್ಲಿ ಪ್ರವಾಸಿಗರ ಅಕ್ರಮ ಪ್ರವೇಶ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್‌ನಲ್ಲಿ ಭರವಸೆ ನೀಡಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಲಕಾವೇರಿಗೆ ಭೇಟಿ ನೀಡುವ ಸಂದರ್ಭ ಪ್ರವಾಸಿಗರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಪ್ರಕರಣಗಳು ಕಂಡು ಬಂದಿಲ್ಲ. ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುವಂತೆ ಮಾರ್ಗಸೂಚಿ ಅಳವಡಿಸಲಾಗಿದ್ದು, ಅದನ್ನು ಪಾಲಿಸಲಾಗುತ್ತಿದೆ ಎಂದರು.
ಇದನ್ನು ಒಪ್ಪದ ವೀಣಾ ಅಚ್ಚಯ್ಯ, ಭಾಗಮಂಡಲ ಪ್ರವಾಸಿ ತಾಣ ಅಲ್ಲದಿದ್ದರೂ ಪ್ರವಾಸಿಗರು ಬಂದು ಅಲ್ಲಿನ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಭಗ್ನ ಶಿವಲಿಂಗ ಸ್ಥಳಾಂತರ ವಿಚಾರ ಕೋರ್ಟ್‌ನಲ್ಲಿದೆ. ಈ ಎಲ್ಲ ವಿಚಾರಗಳ ಬಗ್ಗೆ ಸಚಿವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸುಬ್ರಹ್ಮಣ್ಯದಲ್ಲಿ ಶೌಚಾಲಯ ಸೇರಿದ್ದ ಚಿರತೆ ಕಾರ್ಯಚರಣೆ ವೇಳೆ ಎಸ್ಕೇಪ್!
ಇದಕ್ಕೆ ಉತ್ತರಿಸಿದ ಸಚಿವರು, ಪ್ರವಾಸಿಗರ ಅಕ್ರಮ ಪ್ರವೇಶ ಹಾಗೂ ಅಲ್ಲಿ ನಡೆಯುತ್ತಿದೆ ಎನ್ನಲಾದ ಕಾನೂನುಬಾಹಿರ ಚಟುವಟಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಿವಲಿಂಗ ಪೂಜಾ ಪದ್ದತಿ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಇದೆ ಎಂದರು.