ತೆಕ್ಕಟ್ಟೆ ; ತೆಕ್ಕಟ್ಟೆ ಗ್ರಾಮ ಪಂಚಾಯತ್‌ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜೂ.29 ರಂದು ಭೇಟಿ ನೀಡಿ ಗ್ರಾಮದಲ್ಲಿ ಕೋವಿಡ್-19 ಸೋಂಕಿತ ಕುರಿತು ಮಾಹಿತಿ ಪಡೆದರು .
ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಗ್ರಾ.ಪಂ. ವತಿಯಿಂದ ರಾ.ಹೆ.66 ಪ್ರಮುಖ ಭಾಗದಲ್ಲಿ ಹೈಮಾಸ್ಟ್ ಲೈಟ್ ಅಳವಡಿಕೆ ಹಾಗೂ ಸಾಂತನಕೆರೆ ಪುನಶ್ಚೇತನಕ್ಕಾಗಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಸಂಜೀವ ದೇವಾಡಿಗ, ತೆಕ್ಕಟ್ಟೆ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ , ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ, ಪಿಡಿಒ ಸುನಿಲ್ ಹಾಗೂ ಗ್ರಾ.ಪಂ. ಸದಸ್ಯರಾದ ಶೇಖರ್ ಕಾಂಚನ್ ಕೊಮೆ, ವಿಜಯ ಭಂಡಾರಿ, ವಿನೋದ್ ದೇವಾಡಿಗ, ಸತೀಶ್ ದೇವಾಡಿಗ, ಶೋಭಾನಾ, ಸುರೇಶ್ ಶೆಟ್ಟಿ, ಪ್ರತಿಮಾ ಯು., ಗೋಪಾಲ ಕೊಮೆ,ಕಮಲ ಪೂಜಾರಿ, ರೇಣುಕಾ, ಪ್ರೇಮಾ, ಲಕ್ಷ್ಮೀ, ಆಶಾಕಾರ್ಯಕರ್ತರು,ಅಂಗನವಾಡಿ ಕಾರ್ಯಕರ್ತರುಮತ್ತಿತರರು ಉಪಸ್ಥಿತರಿದ್ದರು. ಪಿಡಿಒ ಸುನಿಲ್ ಸ್ವಾಗತಿಸಿ, ಕಾರ್ಯದರ್ಶಿ ಚಂದ್ರ ಸಹಕರಿಸಿ, ವಂದಿಸಿದರು.
—-