Advertisement
ಇಂದು ಮೈಸೂರು ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
Related Articles
Advertisement
ಇನ್ನು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಸ್ವಾಮೀಜಿ ಹೇಳಿಕೆ ವಿಚಾರದ ಬಗ್ಗೆ ಹೇಳಿಕೆ ತಿರುಗೇಟು ಕೊಟ್ಟ ಸಚಿವರು ಸ್ವಾಮೀಜಿಗಳು ಯಾವ ವಿಚಾರವನ್ನು ಎಲ್ಲಿ ಮಾತಾಡಬೇಕು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ. ಸರಕಾರಿ ಸಮಾರಂಭಕ್ಕೆ ಬಂದು ರಾಜಕೀಯ ವಿಚಾರ ಮಾತಾಡಿದರೆ ಹೇಗೆ? ಸ್ವಾಮೀಜಿ ತಮ್ಮ ಮಠದಲ್ಲಿ ಆ ವಿಚಾರ ಮಾತಾಡಲಿ.
ತಮ್ಮ ಭಕ್ತರ ಮುಂದೆ ಅದನ್ನು ಹೇಳಲಿ. ಯಾರಿಗೆ ಯಾವ ವಿಚಾರ ಎಲ್ಲಿ ಮಾತಾಡಬೇಕು ಎಂದು ಹೇಳುವ ಸ್ಥಿತಿ ಬಂದಿದ್ದೆ ಇದೇ ಬೇಸರದ ವಿಚಾರ ಎಂದು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಸರಕಾರಿ ಜಾಗಗಳ ರಕ್ಷಿಸುವ ಸರ್ವೆ ಶುರುವಾಗಿದೆ. ಒಟ್ಟು 14 ಲಕ್ಷ ಸರಕಾರಿ ಜಾಗಗಳಿವೆ. ಇವುಗಳಲ್ಲಿ ಒತ್ತುವರಿ ಎಷ್ಟು ಆಗಿದೆ ಎಂಬ ಸರ್ವೆ ಶುರು ಮಾಡಿದ್ದೇವೆ.
ಜುಲೈ ಅಂತ್ಯಕ್ಕೆ ಸರ್ವೆ ಮುಗಿಯಲಿದೆ. ನಂತರ ಒತ್ತುವರಿ ತೆರವು ಆರಂಭಿಸುತ್ತೇವೆ. ಸಾರ್ವಜನಿಕವಾಗಿ ಒತ್ತುವರಿ ಜಾಗದ ವಿಚಾರ ತಿಳಿಸಿ ತೆರವು ಮಾಡ್ತಿವಿ. ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿದೆ. ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!