Advertisement

ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್‌.ಈಶ್ವರಪ್ಪ

11:23 PM Feb 03, 2020 | Team Udayavani |

ಬೆಂಗಳೂರು: ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ, ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದರು.

Advertisement

ನರೇಗಾ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸೋಲಾರ್‌ ಅಳವಡಿಕೆ, ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ, ಗ್ರಾಮೀಣ ಕುಡಿಯುವ ನೀರು ಪೂರೈಕೆ, ಶೌಚಾಲಯ ನಿರ್ಮಾಣದ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆದರು. 2019-20 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳನ್ನು ಮಾರ್ಚ್‌ 31 ರೊಳಗೆ ಪೂರ್ಣಗೊಳಿಸಲು ಸೂಚಿಸಿದರು.

2020-21 ನೇ ಸಾಲಿನ ಬಜೆಟ್‌ನಲ್ಲಿ ಕೈಗೊಳ್ಳಬೇಕಿರುವ ಯೋಜನೆಗಳ ಬಗ್ಗೆಯೂ ಚರ್ಚಿಸಿದರು. ಜಿಲ್ಲಾ ಪಂಚಾಯಿತಿಗಳಲ್ಲಿ ಲಭ್ಯವಿರುವ ಹಣಕಾಸಿನ ಲಭ್ಯತೆ, ಯೋಜನೆಗಳ ಅನುಷ್ಟಾನಕ್ಕೆ ಅಗತ್ಯ ಇರುವ ಹಣಕಾಸು ಕುರಿತು ಮಾಹಿತಿ ಪಡೆದುಕೊಂಡರು. ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಯಾಲೆಂಡರ್‌ ಬಿಡುಗಡೆ: ಇದಕ್ಕೂ ಮುನ್ನ ನರೇಗಾ ಕಾರ್ಯಕ್ರಮದಡಿ ಸಿದ್ಧಪಡಿಸಿದ್ದ ಕ್ಯಾಲೆಂಡರ್‌ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next