Advertisement

ನಾವು ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ, ನಮಗೆ ಕೆಲಸ ಮಾಡಲು ಬಿಡಿ… :ಹೆಬ್ಬಾಳ್ಕರ್

04:40 PM Jul 02, 2023 | Team Udayavani |

ಬೆಳಗಾವಿ: ನಮ್ಮ ಸರಕಾರ ಆಡಳಿತ ಶುರು ಮಾಡಿ ಕೇವಲ ಒಂದು ತಿಂಗಳು ಐದು ದಿನಗಳು ಮಾತ್ರ ಆಗುವುದಷ್ಟೇ ನಾವು ಜನರಿಗೆ ಕೊಟ್ಟಂತ ಭಾಷೆಗಳನ್ನು ಒಂದೊಂದಾಗಿ ಈಡೇರಿಸುತ್ತಿದ್ದೇವೆ ಸರಕಾರಕ್ಕೆ ಕೆಲಸ ಮಾಡಲು ಬಿಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Advertisement

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ನಯವಾಗಿಯೇ ತಿರುಗೇಟು ನೀಡಿದ ಸಚಿವೆ ಕುಮಾರಸ್ವಾಮಿ ಅವರು ಕೂಡ ಸರ್ಕಾರ ನಡೆಸಿದಂತ ಅನುಭವ ಇದ್ದವರು ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿಗಳು ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ, ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು, ಐದು ದಿನ ಆಗಿದೆ ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ. ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ, ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದ್ರೆ ಅದು ತಪ್ಪಾಗುತ್ತೆ. ಸ್ವಲ್ಪ ಟೈಮ್ ಕೊಡಿ, ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ. ಜುಲೈ 3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.

ವಿಪಕ್ಷದವರು ಹತಾಶರಾಗಿದ್ದಾರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಹತಾಶ ಆಗಿದ್ದಾರೆ ಅಂತ ಹೇಳಲು ಬಯಸಲ್ಲ ಬಹಳ ನಿರೀಕ್ಷೆ ಇಟ್ಟುಕೊಂಡು ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಕೆಲಸ ಮಾಡಲು ನಮಗೆ ಸಮಯಾವಕಾಶ ನೀಡಿ ಅಂತಾ ಕೇಳುತ್ತಿದ್ದೇನೆ, ಯಾವುದೇ ಗ್ಯಾರಂಟಿ ಆಗಲಿ ಅದನ್ನು ಕೊಟ್ಟ ಮಾತಿನಂತೆ ನೀಡುತ್ತೇವೆ, ಈ ನಡುವೆ ನಮಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಆದರೂ ನಾವು ದುಡ್ಡು ಕೊಟ್ಟು ನಮ್ಮ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತೆ, ಮುಂದಿನ ಆಗಸ್ಟ್‌ನಿಂದ ಗೃಹಲಕ್ಷ್ಮೀ ಯೋಜನೆ ಮನೆಯ ಯಜಮಾನಿಗೆ ಸಿಗುತ್ತೆ, ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ, ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆ ತಕ್ಕ ಹಾಗೇ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Advertisement

ಆಂತರಿಕ ಹೋರಾಟ ಕಡಿಮೆ ಮಾಡಿಕೊಳ್ಳಲಿ

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿ ಮೊದಲು ತಮ್ಮ ಆಂತರಿಕ ಹೋರಾಟ ಕಡಿಮೆ ಮಾಡಿಕೊಳ್ಳಲಿ” ಎಂದು ವ್ಯಂಗ್ಯವಾಡಿದರು.

ನಾನು ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವಳಲ್ಲ, ಆದರೆ ಮೊದಲು ಅವರು ತಮ್ಮ ಆಂತರಿಕ ಹೋರಾಟ ಕಡಿಮೆ ಮಾಡಿಕೊಳ್ಳಲಿ. ಆಮೇಲೆ ಬೇರೆಯವರ ಬಗ್ಗೆ ಮಾತನಾಡಲಿ. ಹೋರಾಟ ಮಾಡುತ್ತಾರೆ ಅಂದರೆ ಅದು ಅವರ ಹಕ್ಕು. ಅವರು ವಿರೋಧ ಪಕ್ಷದಲ್ಲಿ ಇದ್ದಾರೆ, ಹೋರಾಟ ಮಾಡಲಿ ನಮ್ಮದೇನು ಅಭ್ಯಂತರ ಇಲ್ಲ ಎಂದರು.

ನಾವೇನು ರಾಜ್ಯದ ಜನತೆಗೆ ವಾಗ್ದಾನ ಮಾಡಿದ್ದೇವೆ ಸುಭದ್ರವಾದ ಸರ್ಕಾರ, ಸಮೃದ್ಧಿಯತ್ತ ಕರ್ನಾಟಕ ರಾಜ್ಯ, ಅದನ್ನ ನಾವು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ YST ತೆರಿಗೆ ಜಾರಿಗೆ ಬಂದಿದೆ: ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ನೇರ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next