Advertisement

Byndoor ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

11:57 PM Jul 21, 2024 | Team Udayavani |

ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.

Advertisement

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೋಮೇಶ್ವರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಪಡೆಯುತ್ತೇನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು. ಬಳಿಕ ಒತ್ತಿನೆಣೆಯಲ್ಲಿ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಎಸ್‌ಪಿ ಡಾ| ಕೆ.ಅರುಣ್‌, ಕುಂದಾಪುರ ಸಹಾಯಕ ಕಮಿಷನರ್‌ ರಶ್ಮೀ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಹಶೀಲ್ದಾರ್‌ ಪ್ರದೀಪ್‌ ಆರ್‌. ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next