Advertisement

Belagavi: ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ

03:28 PM Aug 28, 2024 | Team Udayavani |

ಬೆಳಗಾವಿ: ಈ ವರ್ಷ ಉತ್ತಮ ಮಳೆಯಾದ ಕಾರಣ ರಾಜ್ಯದ ಅಣೆಕಟ್ಟೆಗಳು ಭರ್ತಿಯಾಗಿ, ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Advertisement

ತಾಲೂಕಿನ ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವರು, ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಭಾವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಇಂದು ಗಂಗಾಮಾತೆಗೆ ಬಾಗಿನ ಅರ್ಪಿಸಿರುವುದು ಖುಷಿ ತಂದಿದೆ ಎಂದರು.

ಸಿದ್ಧನಬಾವಿ ಕೆರೆಯ ನೀರು ಸಂಗ್ರಹದಿಂದಾಗಿ ಬೋರ್ ವೆಲ್ ಗಳ ಅಂತರ್ಜಲ ವೃದ್ಧಿಯಾಗಲಿದೆ. ಇದರಿಂದ ಜನರಿಗೆ, ಜಾನುವಾರುಗಳಿಗೆ, ಸುತ್ತಮುತ್ತಲಿನ ರೈತರಿಗೆ ಸಹಾಯವಾಗಲಿದೆ. ಈ ಮೊದಲು ಕೆರೆ ತುಂಬಿಸುವ ಭರವಸೆ ನೀಡಿದ್ದೆ, ಇದೀಗ ನುಡಿದಂತೆ ಕೆರೆ ತುಂಬಿಸುವ ಕಾರ್ಯ ಮಾಡಲಾಗಿದೆ. 19 ಕೋಟಿ ರೂ‌. ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.

ಈ ವರ್ಷ ಉತ್ತಮ ಮಳೆಯಾದ ಪರಿಣಾಮ ಇವತ್ತು ಎಲ್ಲ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ. ಹಿರೇ ಬಾಗೇವಾಡಿ ಭಾಗದ ಜನರು ನನಗೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಹಿರೇಬಾಗೇವಾಡಿ ಗ್ರಾಮದ 80 ಎಕರೆ ಜಮೀನು ವಿಶ್ವವಿದ್ಯಾಲಯಕ್ಕೆ ಹೋಗಿದ್ದು, ಸಿಎಂ, ಉನ್ನತ ಶಿಕ್ಷಣ ಸಚಿವರ ಹತ್ತಿರ ಮಾತನಾಡಿ ಮಲ್ಲಯ್ಯನ ಗುಡ್ಡದಲ್ಲಿ ಗ್ರಾಮಸ್ಥರಿಗಾಗಿ 10 ಎಕರೆ ವಾಪಸ್ ಪಡೆಯಲಾಗುವುದು. ಜತೆಗೆ ಆ ಜಮೀನಿನಲ್ಲಿ ಮಲ್ಲಯ್ಯನ ದೇವಸ್ಥಾನವನ್ನು ನಿರ್ಮಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Advertisement

ಕೆರೆಗೆ ಬಾಗಿನ ಅರ್ಪಿಸಿರುವುದು ನನ್ನ ಅದೃಷ್ಟ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಹಿರೇಬಾಗೇವಾಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲಾಗುವುದು ಎಂದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾಜ ಚನ್ನರಾಜ ಹಟ್ಟಿಹೊಳಿ, ಜಾಲಿಕರೆಮ್ಮದೇವಿ ಆರಾಧಕರಾದ ಉಳವಪ್ಪ ಅಜ್ಜನವರು, ಗಂಗಯ್ಯ ಸ್ವಾಮಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪ ನಾಯ್ಕರ್, ಸುರೇಶ್ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ಅನಿಲ ಪಾಟೀಲ, ಶ್ರೀಕಾಂತ ಮಾಧುಭರಮಣ್ಣವರ, ಅದಿವೇಶ್ ಇಟಗಿ, ಪಡಿಗೌಡ ಪಾಟೀಲ, ಶಿಪು ಹಳೇಮನಿ, ಪ್ರಕಾಶ ಜಪ್ತಿ, ಖತಾಲ್ ಗೋವೆ, ಮಹಾಂತೇಶ ಹಂಚಿನಮನಿ, ನಿಂಗಪ್ಪ ತಳವಾರ, ಆನಂದ ಪಾಟೀಲ, ಅಡಿವೆಪ್ಪ ತೋಟಗಿ, ಆನಂದ ಪಾಟೀಲ, ರಘು ಪಾಟೀಲ ಗ್ರಾಮದ ನೂರಾರು ಮಹಿಳೆಯರು, ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಗ್ರಾಮದ ಪ್ರಮುಖರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next