ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋ ತ್ತರ ಕಲಾಪ ವೇಳೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಎತ್ತಿದ ಪ್ರಶ್ನೆಗೆ ಸಚಿವರು ಉತ್ತರಿಸಿ, ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿ ನದಿ ಪಾತ್ರಗಳ ವ್ಯಾಪ್ತಿಯಲ್ಲಿ ಟೆಂಡರ್ ಮತ್ತು ಹರಾಜು ಮೂಲಕ 25 ಮರಳು ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದೆ. ಇಲ್ಲಿ ಮರಳು ಗಣಿಗಾರಿಕೆ ನಡೆಸಿ ಮರಳನ್ನು ಸಾರ್ವಜನಿಕ ಮತ್ತು ಸರಕಾರಿ ಕಾಮಗಾರಿಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದರು.
Advertisement
ಇದಕ್ಕೆ ಆಕ್ಷೇಪಿಸಿದ ವೇದವ್ಯಾಸ ಕಾಮತ್, ಕರಾವಳಿಯಲ್ಲಿ ಮರಳು ಗಣಿಗಾರಿಕೆ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಬೇಕು ಎಂದರಲ್ಲದೆ, ಮರಳು ಸಾಗಾಟ ಮತ್ತು ತೆಗೆಯಲು ನಿರಾಕ್ಷೇಪಣಾ ಪತ್ರ ನೀಡಲು ಮೀನಾಮೇಷ ಎಣಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿಗೂಡಿಸಿದ ಇತರ ಪಕ್ಷಗಳ ಸದಸ್ಯರು ಮರಳು ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ ಎಂದು ಸಚಿವರನ್ನು ಒತ್ತಾಯಿಸಿದರು.