Advertisement
ಈ ಕುರಿತು ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಎಂ.ಬಿ.ಪಾಟೀಲ್, ಮಗುವಿನ ಸುರಕ್ಷಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್.ಡಿ.ಆರ್. ಎಫ್., ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Related Articles
Advertisement
ತೆರೆದ ಬೋರ್ ವೆಲ್ ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸೂಚನೆ
ಇದೇ ವೇಳೆ, ಸಚಿವ ಪಾಟೀಲ್ ಅವರು ಮುಚ್ಚದೆ ಹಾಗೆಯೇ ಬಿಟ್ಟಿರುವ ಕೊಳವೆಬಾವಿಗಳ ಬಗ್ಗೆ ಜಿಲ್ಲೆಯಾದ್ಯಂತ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲು ಈಗಾಗಲೇ ಕಾನೂನಿದೆ. ಜಿಲ್ಲೆಯಲ್ಲಿ ಸರ್ವೆ ನಡೆಸಿ, ಬೋರ್ವೆಲ್ ಗಳನ್ನು ಮುಚ್ಚದೆ ಬಿಟ್ಟಿದ್ದರೆ, ಸಂಬಂಧ ಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿರುವಂತೆ ಪ್ರಕರಣ ದಾಖಲಿಸಲು ಅವರು ನಿರ್ದೇಶನ ನೀಡಿದ್ದಾರೆ.