Advertisement

Vijayapura ಬಿಇಒ ಅಮಾನತಿಗೆ ಸಚಿವ ಎಂ.ಬಿ.ಪಾಟೀಲ್ ಸೂಚನೆ

03:07 PM Jun 23, 2023 | Team Udayavani |

ವಿಜಯಪುರ: ಸರ್ಕಾರಿ ಶಾಲಾ ಆವರಣದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಅವಕಾಶ ನೀಡದ ಬಿಇಒ ಅವರನ್ನು ಅಮಾನತು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ನಿರ್ದೇಶನ ನೀಡಿದ್ದಾರೆ.

Advertisement

ಶುಕ್ರವಾರ ನಗರದಲ್ಲಿರುವ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿವೃದ್ಧಿ ಕೆಲಸಕ್ಕೆ ತಮ್ಮ ತವರು ಕ್ಷೇತ್ರದ ಬಿಇಒ ವರ್ತನೆ ಬಗ್ಗೆ ಜವಳಿ ಸಚಿವ ಶಿವಾನಂದ ಪಾಟೀಲ ವಿಷಯ ಪ್ರಸ್ತಾಪಿಸಿದರು.

ಯರನಾಳ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡುತ್ತಿಲ್ಲ. ಇದರಿಂದಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ತೊಡಕುಂಟು ಮಾಡುತ್ತಿದ್ದಾರೆ ಎಂದು ಬಸವನಬಾಗೇವಾಡಿ ಬಿಇಒ ಶೇಖರ ಬಳಬಟ್ಟಿ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಈ ವೇಳೆ ಕೆಡಿಪಿ ಸಭೆಯ ಅಧ್ಯಕ್ಕತೆ ವಹಿಸಿದ್ಧ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಬಸವನಬಾಗೇವಾಡಿ ಬಿಇಒ ಅವರನ್ನು ಅಮಾನತು ಮಾಡುವಂತೆ ಡಿಡಿಪಿಐ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next