Advertisement

ಬರ ಘೋಷಣೆಗೆ ನಿಯಮ ಅಡ್ಡಿ: ಬೊಮ್ಮಾಯಿ ರಾಜಕೀಯ ಬಿಟ್ಟು ಪ್ರಧಾನಿಗೆ ಮನವಿ ಮಾಡಲಿ: ಸಚಿವ ಪಾಟೀಲ್

06:11 PM Aug 25, 2023 | Team Udayavani |

ವಿಜಯಪುರ: ರಾಜ್ಯದ ಬರ ಪರಿಸ್ಥಿತಿ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಮಾಡುವುದನ್ನು ಬಿಡಬೇಕು. ಅಲ್ಲದೇ ರಾಜ್ಯದ ಜನರ ಹಿತದೃಷ್ಟಿಯಿಂದ ಬರ ಘೋಷಣೆಗೆ ಅಡ್ಡಿಯಾಗಿರುವ ಎನ್‍ಡಿಆರ್‍ಎಫ್ ನಿಯಮಗಳ ಸಡಿಲಿಕೆಗಾಗಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

Advertisement

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿ, ಸಮಸ್ಯೆ ಎದುರಾಗಿದೆ. ಹೀಗಾಗಿ ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸಲು ಬೊಮ್ಮಾಯಿ ಅವರು ಮುಂದಾಗಲಿ ಎಂದು ಕುಟುಕಿದರು.

ಬರ ಪೀಡಿತ ಜಿಲ್ಲೆಗಳೆಂದು ಘೋಷಿಸುವ ಕುರಿತು ಕೇಂದ್ರ ಸರ್ಕಾರದ ನಿಯಮಗಳು ಅಡ್ಡಿಯಾಗಿವೆ. ಹೀಗಾಗಿ ಇಲ್ಲಿ ಮಾತನಾಡುವ ಬದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಬಿಟ್ಟು ರಾಜ್ಯದ ಜನರ ನೆರವಿಗೆ ಬರಬೇಕಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿ ಎಂದು ಸಲಹೆ ನೀಡಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಮಳೆ ಇಲ್ಲದೇ ಬರ ಆವರಿಸಿದ್ದು, ರಾಜ್ಯ ಸರ್ಕಾರ ಬರ ಪೀಡಿತ ಜಿಲ್ಲೆಗಳೆಂದು ಘೋಷಿಸಲು ಆಗ್ರಹಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಲಿ ಎಂದರು.

ಬರ ಘೋಷಣೆ ವಿಷಯವಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ ಸಚಿವರು ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್ ನಿಮಯಗಳ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಬರ ಘೋಷಣೆಗೆ ಇರುವ ಮಾನದಂಡಗಳನ್ನು ಸಡಿಲಿಸಲು ಮನವಿ ಮಾಡಲಿ ಎಂದರು.

Advertisement

ಇದನ್ನೂ ಓದಿ: Economic growth ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ: ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next