Advertisement

Minister MB Patil:ಚುನಾವಣೆ ಹಿನ್ನಡೆಗೆ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ; ಎಂಬಿಪಿ

09:13 PM Jun 08, 2024 | Suhan S |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್‌ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, “ಕಳೆದ 1 ವರ್ಷದಲ್ಲಿ ರಾಜ್ಯ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next