Advertisement

Belagavi: 13 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಣೆ

10:05 AM Oct 06, 2023 | Team Udayavani |

ಬೆಳಗಾವಿ: ಜಿಲ್ಲೆಯ ಎಲ್ಲ 15 ತಾಲೂಕುಗಳಲ್ಲಿ ಬಿತ್ತನೆ ಸಂದರ್ಭದಲ್ಲಿ ಮೂರು ವಾರಕ್ಕಿಂತ ಹೆಚ್ಚು ಅವಧಿಯವರೆಗೆ ಮಳೆಯಾಗಿರಲಿಲ್ಲ. ಆದ್ದರಿಂದ ಬರ‌ ಪರಿಸ್ಥಿತಿ ಎದುರಾಗಿದೆ. ಆದರೆ ಹದಿನೈದು ತಾಲೂಕುಗಳ ಪೈಕಿ ಬೆಳಗಾವಿ ಮತ್ತು ಖಾನಾಪುರ ಹೊರತುಪಡಿಸಿ 13 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

Advertisement

ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ ಅವರು ಜೂನ್ ತಿಂಗಳಲ್ಲಿ ಮಳೆ ಬಾರದಿರುವುದರಿಂದ ಯಾವುದೇ ರೀತಿಯ ಬಿತ್ತನೆ ಕಾರ್ಯ ಆರಂಭಗೊಳ್ಳಲಿಲ್ಲ. ಜುಲೈ ಮೊದಲ ಮೂರು ವಾರ ಮಳೆ ಬಂದಿರಲಿಲ್ಲ, ಕೊನೆಯ ವಾರದಲ್ಲಿ ಮಾತ್ರ ಮಳೆಯಾಗಿದ್ದರಿಂದ ಆಗ ಬಿತ್ತನೆ ಕಾರ್ಯ ಆರಂಭಗೊಂಡಿತು. ಆಗಸ್ಟ್ ದಲ್ಲಿ ಮಳೆ ಕೊರತೆಯಾಗಿದ್ದರಿಂದ ರಾಜ್ಯ ಸರಕಾರವು ಬರ ಪರಿಸ್ಥಿತಿ ಘೋಷಣೆ ಮಾಡಿತು ಎಂದು ಹೇಳಿದರು.

ಬೆಳೆಹಾನಿ, ಕುಡಿಯುವ ನೀರಿನ ಕೊರತೆ, ಮೇವು ಕೊರತೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಆಯುಕ್ತ ವೈ.ಎಸ್.ಪಾಟೀಲ ಮಾತನಾಡಿ, ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಮಳೆ ಕೊರತೆಯಿಂದಾಗಿ ಅನೇಕ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು ಎಂದು ಮಾಹಿತಿ ನೀಡಿದರು.

ನಂತರ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ತಂಡ ಬೈಲಹೊಂಗಲ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳಲ್ಲಿ ಸಂಚರಿಸಿ ಬೆಳೆಹಾನಿಯನ್ನು ವೀಕ್ಷಿಸಿತು.

Advertisement

ಎಣ್ಣೆಬೀಜ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಕೆ.ಪೊನ್ನುಸ್ವಾಮಿ, ಕೇಂದ್ರ ಆರ್ಥಿಕ ವೆಚ್ಚ ಇಲಾಖೆಯ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯಾ, ನೀತಿ ಆಯೋಗದ ಸಂಶೋಧನಾ ಅಧಿಕಾರಿ ಶಿವಚರಣ ಮೀನಾ, ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ ಅವರು ತಂಡದಲ್ಲಿದ್ದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್, ಕೃಷಿ ಇಲಾಖೆಯ ಹಿರಿಯ ಅಧಿಕಾರಿ ಡಾ.ವಿ.ಜೆ.ಪಾಟೀಲ, ಬೆಳಗಾವಿ ಜಿಲ್ಲೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಉಪ ನಿರ್ದೇಶಕ ಡಾ.ಎಚ್.ಡಿ.ಪಾಟೀಲ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next