Advertisement
ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಂಟಿಬಿ ನಾಗರಾಜ್ ,ಸರ್ಕಾರ ಪೌರ ಕಾರ್ಮಿಕರ ಪರ ಸಹಾನುಭೂತಿ ಹೊಂದಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದವಾಗಿದೆ.ಹಾಗಾಗಿ, ಪೌರ ಕಾರ್ಮಿಕ ಸಂಘಟನೆಗಳು ಜುಲೈ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು.
Related Articles
Advertisement
ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ನೌಕರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪ್ರಸ್ತುತ ಜಾರಿಯಲ್ಲಿರುವ ಆರೋಗ್ಯ ವಿಮೆ ಸೌಲಭ್ಯವನ್ನು ಎಲ್ಲಾ ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ನೌಕರರಿಗೂ ಅನ್ವಯವಾಗುವಂತೆ ವಿಸ್ತರಿಸುವ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವ ಎಂಟಿಬಿ ನಾಗರಾಜ್ ನಿರ್ದೇಶನ ನೀಡಿದರು.
2018ರಲ್ಲಿ ರಚಿಸಲಾಗಿರುವ ಪೌರಕಾರ್ಮಿಕರನೇಮಕಾತಿ ವಿಶೇಷ ನಿಯಮಾವಳಿಗಳನ್ನು ಪುನರ್ ಪರಿಶೀಲಿಸಲು ಅನುಕೂಲವಾಗುವಂತೆ ಈಗಾಗಲೇ ಕರ್ತವ್ಯದಲ್ಲಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾಕಾರ್ಮಿಕರ ಸೇವಾ ವಿವರಗಳನ್ನು ಒಂದು ವಾರದ ಒಳಗಾಗಿ ಸಂಗ್ರಹಿಸಿ ಅಗತ್ಯ ಶಿಫಾರಸ್ಸುಗಳೊಂದಿಗೆ ಕಡತ ಮಂಡಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಪೌರ ಕಾರ್ಮಿಕರ ಇನ್ನುಳಿದ ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಆದೇಶಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಶ್ರೀಮತಿ ಅರ್ಚನ, ಜಂಟಿ ನಿರ್ದೇಶಕ ಶಿವಸ್ವಾಮಿ ಪಾಲ್ಗೊಂಡಿದ್ದರು.