Advertisement

ನೆರೆ ಪ್ರದೇಶ ವೀಕ್ಷಣೆಗೆ ಬಾರದ ಉಸ್ತುವಾರಿ ಸಚಿವ

02:46 PM Sep 13, 2022 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿದು ರೈತರು ಮತ್ತು ಜನಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿ ದ್ದಾರೆ ಇಂತಹ ಸಂದರ್ಭದಲ್ಲಿ ಜನರ ಆಹವಾಲುಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ನಾಗರಾಜ್‌ (ಎಂಟಿಬಿ) ಅವರ ದರ್ಶನ ಭಾಗ್ಯವೇ ಇಲ್ಲದಂತಾಗಿದೆ.

Advertisement

ಮುಂಬರುವ ವಿಧಾನ ಸಭೆಯ ಚುನಾವಣೆ ಹಿನ್ನೆಲೆ ಯಲ್ಲಿ ಬಯಲುಸೀಮೆಯ ಚಿಕ್ಕಬಳ್ಳಾಪುರ ಕೋಲಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುವ ದೃಷ್ಟಿಕೋನದಿಂದ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಭಾಗವಹಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ನಾಗ ರಾಜ್‌ (ಎಂಟಿಬಿ) ಅವರು ಹಾಡುವೊಂದಕ್ಕೆ ಹೆಜ್ಜೆ ಹಾಕಿ ಕುಣಿದಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಇವರಿಗೆ ಸಾಧ್ಯವಿಲ್ಲವೇ ಎಂದು ಜಿಲ್ಲೆಯ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್‌. ನಾಗರಾಜ್‌ (ಎಂಟಿಬಿ) ಅವರನ್ನು ದಿಢೀರ್‌ ಬೆಳವಣಿಗೆಯಿಂದ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕ ಮಾಡ ಲಾಗಿತ್ತು ಅದರಂತೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವ ಹಿಸುತ್ತಿದ್ದ ಡಾ.ಕೆ.ಸುಧಾಕರ್‌ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ  ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಲು ಒಲ್ಲದ ಮನಸ್ಸಿನಿಂದ ಜಿಲ್ಲೆಗೆ ಬಂದು ಅನೇಕ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಇತ್ತೀಚೆಗೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿ ಅನೇಕ ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಮತ್ತೂಂದೆಡೆ ರಾಜಕಾಲುವೆಗಳನ್ನು ಒತ್ತುವರಿಯಾಗಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮಳೆಯ ನೀರು ಸರಾಗವಾಗಿ ಹರಿಯದೆ ಮನೆಗಳು ಮತ್ತು ಹೊಲಗಳಿಗೆ ಹರಿದಿದೆ. ಆದರೆ ಜಿಲ್ಲೆಯ ಜನರ ಕಷ್ಟಗಳನ್ನು ಆಲಿಸಬೇಕಾದ ಉಸ್ತುವಾರಿಗಳ ದರ್ಶನವಿಲ್ಲದಂತಾಗಿದೆ.

ಕೇವಲ ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರ ಶಾಶ್ವತವಲ್ಲ ಸಿಕ್ಕ ಅಧಿಕಾರ ಜನರ ಸೇವೆಗಾಗಿ ಮುಡುಪಾಗಿಡಬೇಕೆಂಬ ಭಾಷಣವನ್ನು ಬಿಗಿಯುತ್ತಾರೆ. ಆದರೆ, ಜಿಲ್ಲೆಯ ಜನರು ಮಳೆಯಿಂದ ಕಷ್ಟವನ್ನು ಅನುಭವಿಸಿಲ್ಲವೇ? ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಜನರ ಹಿತ ಮುಖ್ಯವಲ್ಲವೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಉಸ್ತುವಾರಿಗಳು ಯಾವಾಗ ಬರ್ತಾರೆ? : ಜಿಲ್ಲೆಯಲ್ಲಿ ಸುರಿದ ಮಳೆಯ ಸಂದರ್ಭದಲ್ಲಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಇತ್ತೀಚೆಗೆ ಜಿಲ್ಲೆಗೆ ದರ್ಶನವಿಲ್ಲದಂತಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಜನ ಅನೇಕ ರೀತಿಯಲ್ಲಿ ಕಷ್ಟವನ್ನು ಎದುರಿಸಿದ್ದಾರೆ. ಹಲವರು ಮಳೆ ಯಿಂದ ಮನೆಗಳನ್ನು ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತ್ರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಯಾವಾಗ ಬರುತ್ತಾರೆ? ಎಂದು ಜನ ಕಾಯುವಂತಾಗಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿದು ಜನ ಸಮಸ್ಯೆಗೆ ಸಿಲುಕಿದ್ದಾರೆ ರೈತರು ಕೋಟ್ಯಾಂತರ ರೂ. ನಷ್ಟವಾಗಿದೆ ಜಿಲ್ಲಾ ಉಸ್ತುವಾರಿ ಸಚಿವರು ಜನಸ್ಪಂದನಾ ಸಮಾವೇಶದಲ್ಲಿ ನೃತ್ಯ ಮಾಡುತ್ತಾ ಕಾಲಾಹರಣ ಮಾಡಿದ್ದಾರೆ. ಅವರಿಗೆ ರೈತರು ಮತ್ತು ಜನರ ಕಷ್ಟಗಳಿಗೆ ಸ್ಪಂದಿಸಲು ಇಚ್ಚಾಶಕ್ತಿಯೇ ಇಲ್ಲದಂತಾಗಿದೆ. ಕೆ.ಎನ್‌.ಕೇಶವರೆಡ್ಡಿ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ

ಚಿಕ್ಕಬಳ್ಳಾಪುರ ಕ್ಷೇತ್ರ ಸಹಿತ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗಿದೆ. ರೈತರು ಒಂದು ಬೆಳೆ ಇಡಲು ಒಂದು ವರ್ಷ ಕಾಯುವಂತಹ ಸ್ಥಿತಿ ಸೃಷ್ಟಿಯಾಗಿದೆ. ರೈತರು ಕಷ್ಟವನ್ನು ಆಲಿಸಿ ಪರಿಹಾರ ಕಲ್ಪಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿ ಜನರನ್ನು, ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆ. –ಕೆ.ಎಂ. ಮುನೇಗೌಡ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷರು

 

ಎಂ.ಎ.ತಮೀಮ್‌ಪಾಷ

Advertisement

Udayavani is now on Telegram. Click here to join our channel and stay updated with the latest news.

Next